
Sidlaghatta : ಗೌರಿ ಗಣೇಶ ಹಬ್ಬದ ಅಂಗವಾಗಿ ಶಿಡ್ಲಘಟ್ಟ ನಗರಸಭೆ ಕಚೇರಿ ಹಾಗೂ ನ್ಯಾಯಾಲಯದ ಆವರಣದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಗರಸಭೆ ಪೌರಾಯುಕ್ತೆ ಅಮೃತ ಜಿ. ಅವರ ನೇತೃತ್ವದಲ್ಲಿ ನಗರಸಭೆ ಕಚೇರಿ ಆವರಣದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪುಷ್ಪಾರ್ಚನೆ, ವಿಶೇಷ ಪೂಜೆ ಹಾಗೂ ಆರತಿ ನೆರವೇರಿಸಲಾಯಿತು.
In English: As part of Gauri Ganesha festival celebrations, Ganesha idols were installed and special pujas held at both the Sidlaghatta Municipal Council (Nagarasabhe) office, led by Commissioner Amrutha G., and at the Sidlaghatta Court premises, where judges, lawyers and court staff took part.
ಹಬ್ಬದ ಹಿನ್ನೆಲೆಯಲ್ಲಿ ಕಚೇರಿ ಆವರಣವನ್ನು ಅಲಂಕರಿಸಲಾಗಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿ ಭಕ್ತಿಭಾವದಿಂದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಶಿಡ್ಲಘಟ್ಟದ ನ್ಯಾಯಾಲಯದ ಆವರಣದಲ್ಲಿಯೂ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಕಾರ್ಯದರ್ಶಿ ಭಾಸ್ಕರ್ ಹಾಗೂ ಹಿರಿಯ ವಕೀಲ ಪಾಪಿರೆಡ್ಡಿ ಸೇರಿದಂತೆ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಗೌರಿ ಗಣೇಶ ಹಬ್ಬದ ಅಂಗವಾಗಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ, ಎಲ್ಲರಿಗೂ ಸುಖ, ಶಾಂತಿ, ಆರೋಗ್ಯ ಹಾಗೂ ಸಮೃದ್ಧಿ ದೊರೆಯಲಿ ಎಂದು ಪ್ರಾರ್ಥಿಸಲಾಯಿತು. ಎರಡೂ ಸ್ಥಳಗಳಲ್ಲಿ ಹಬ್ಬದ ವಾತಾವರಣ ಕಳೆಗಟ್ಟಿತ್ತು. ಈ ಸಂದರ್ಭದಲ್ಲಿ ನಗರಸಭೆಯ ಅಪ್ಪಿ, ರವಿ, ಸೀನಾ, ಮುಬಾರಕ್ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ತಾಲ್ಲೂಕಿನ ವೀರಪುರ ಕಲ್ಯಾಣಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ನಗರಸಭೆ ವ್ಯವಸ್ಥೆ ಮಾಡಿರುವುದಾಗಿ ಈ ಹಿಂದೆ ಪ್ರಕಟಿಸಿತ್ತು.