ನಗರಸಭೆ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೇ ಅನಧಿಕೃತವಾಗಿ ಅಂಗಡಿ ಮುಂಗಟ್ಟುಗಳನ್ನು ನಿರ್ಮಿಸಿಕೊಂಡು ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪೌರಾಯುಕ್ತ ಶ್ರೀನಿವಾಸ್ ಎಚ್ಚರಿಸಿದ್ದಾರೆ.
ನಗರದ ಚಿಂತಾಮಣಿ ಬೈಪಾಸ್ ರಸ್ತೆಯಲ್ಲಿರುವ ಗೌಡನಕೆರೆ ಬಳಿ ಆನೂರು ಗೇಟ್ ಬಳಿ ಅನಧಿಕೃತವಾಗಿ ರಸ್ತೆ ಬದಿಯಲ್ಲಿ ಅಂಗಡಿಗಳನ್ನು ನಿರ್ಮಿಸಿಕೊಂಡು ಮಾಂಸ, ಮೀನು ಮಾರಾಟ ಮಾಡುತ್ತಿದ್ದ ಅಂಗಡಿಗಳನ್ನು ಶನಿವಾರ ತೆರವುಗೊಳಿಸಿ ಅವರು ಮಾತನಾಡಿದರು.
ರಸ್ತೆಯ ಬದಿಯಲ್ಲಿ ಈ ರೀತಿ ಅಂಗಡಿಗಳನ್ನು ನಿರ್ಮಿಸಿಕೊಂಡು ವ್ಯಾಪಾರ ಮಾಡುವುದರಿಂದ ಬೀದಿ ನಾಯಿಗಳ ಹಾವಳಿ ಹಾಗೂ ಹೆಚ್ಚಿನ ಜನಸಂದಣಿ ಉಂಟಾಗಿ ಅಪಘಾತಗಳಾಗುವ ಸಾಧ್ಯತೆಗಳಿವೆ. ಹಾಗಾಗಿ ಇಂತಹ ಅಂಗಡಿಗಳನ್ನು ಗುರುತಿಸಿ ತಾಲ್ಲೂಕು ಪಂಚಾಯಿತಿ ಮತ್ತು ಪೊಲೀಸ್ ಇಲಾಖೆಯ ಸಹಕಾರದಿಂದ ತೆರವುಗೊಳಿಸಿದ್ದೇವೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್, ನಗರಠಾಣೆ ಪಿಎಸ್ಸೈ ಸಂಗಮೇಶ್ ಮೇಠಿ, ನಗರಸಭೆ ಆರೋಗ್ಯ ನಿರೀಕ್ಷಕಿ ಶೋಭ, ಪೊಲೀಸ್ ಸಿಬ್ಬಂದಿ ಹಾಜರಿದ್ದರು.