Home News ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿದ ಅಧಿಕಾರಿಗಳು

ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿದ ಅಧಿಕಾರಿಗಳು

0
Plastic Ban Sidlahgatta

Sidlaghatta : ಶಿಡ್ಲಘಟ್ಟ ನಗರಸಭೆ ಹಾಗೂ ಜಿಲ್ಲಾ ಪರಿಸರ ಇಲಾಖೆ ಅಧಿಕಾರಿಗಳ ಜಂಟಿ ತಂಡ ನಗರದ ವಿವಿಧ ಅಂಗಡಿ ಮತ್ತು ಹೋಟೆಲ್ ಗಳ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮತ್ತು ಬಳಕೆ ಮಾಡುತ್ತಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ದಂಡ ವಿಧಿಸಿದರು.

ನಗರದಲ್ಲಿನ ಹಲವಾರು ಅಂಗಡಿ, ಹೋಟೆಲ್ ಇನ್ನಿತರ ಕಡೆ ನಿಷೇಧಿತ ಪ್ಲಾಸ್ಟಿಕ್‍ನ ಕವರ್, ಪೇಪರ್ ತಟ್ಟೆ, ಪೇಪರ್ ಲೋಟಗಳನ್ನು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು ಮಾರಾಟಗಾರರಿಗೆ ದಂಡ ವಿಧಿಸಿದರು. ಸುಮಾರು 10 ಅಂಗಡಿಗಳು, ಹೋಟೆಲ್ ಗಳ ಮೇಲೆ ದಾಳಿ ನಡೆಸಿ ಮಾರಾಟ ಮಾಡುತ್ತಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು, 6,500 ರೂಗಳ ದಂಡವನ್ನು ವಿಧಿಸಿದರು. 100 ಮೈಕ್ರಾನ್‍ಗಿಂತಲೂ ಕಡಿಮೆಯ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡದಂತೆ ಅಂಗಡಿಗಳ ಮಾಲೀಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.

ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್, ವ್ಯವಸ್ಥಾಪಕ ಸತ್ಯನಾರಾಯಣ್, ಆರೋಗ್ಯ ನಿರೀಕ್ಷಕ ಮುರಳಿ,
ಪರಿಸರ ಇಲಾಖೆ ಆಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version