Home News ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜನ್ಮದಿನಾಚರಣೆ

ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜನ್ಮದಿನಾಚರಣೆ

0
Nalvadi Krishnaraja Wadiyar Birth Anniversary

Sidlaghatta : ಶಿಡ್ಲಘಟ್ಟ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಅಕ್ಷರ ಪಿ.ಯು ಕಾಲೇಜು ಇವರ ಸಹಯೋಗದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರು ಹಾಗೂ ನವ ಮೈಸೂರಿನ ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 141 ನೇ ಜನ್ಮದಿನಾಚರಣೆ ಹಾಗೂ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮವನ್ನು ನಡೆಸಲಾಯಿತು.

ಈ ಕಾರ್ಯಕ್ರಮದ ಅಂಗವಾಗಿ “ಆಧುನಿಕ ನವ ಮೈಸೂರಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆಗಳು” ಎಂಬ ವಿಷಯವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಪ್ರಮಾಣಪತ್ರವನ್ನು ನೀಡಲಾಯಿತು.

ತಾಲ್ಲೂಕು ಕಸಾಪ ಅಧ್ಯಕ್ಷ ನಾರಾಯಣಸ್ವಾಮಿ, ಅಕ್ಷರ ಪಿಯು ಕಾಲೇಜಿನ ಪ್ರಾಂಶುಪಾಲ ಬಿ. ವಿ. ಪ್ರಕಾಶ್, ಕಸಾಪ ಮಾಜಿ ಜಿಲ್ಲಾಧ್ಯಕ್ಷ ಎಸ್.ವಿ.ನಾಗರಾಜರಾವ್, ಎಚ್.ಎಂ.ರಂಗನಾಥ್, ಮುನಿನಾರಾಯಣಪ್ಪ, ಟಿ.ಟಿ.ನರಸಿಂಹಪ್ಪ, ಸುರೇಶ್, ದೇವರಾಜ್, ಎನ್.ಸುಂದರ್, ರಮೇಶ್, ಶುಭ, ಚಂದ್ರಶೇಖರ್, ಕಮಲ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version