ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 301 ಪ್ರಕರಣ ಇತ್ಯರ್ಥ, ₹1.59 ಕೋಟಿ ಪಾವತಿ

- Advertisement -
- Advertisement -

Sidlaghatta : ನಗರದ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದ ದಂಪತಿಗೆ ಕೌಟುಂಬಿಕ ಜೀವನದ ಮಹತ್ವದ ಕುರಿತು ಮನವರಿಕೆ ಮಾಡಿಕೊಟ್ಟು, ಇಬ್ಬರನ್ನೂ ಮತ್ತೆ ಒಂದಾಗಿಸಲಾಯಿತು.

ನ್ಯಾಯಾಲಯದ ಮಾರ್ಗದರ್ಶನ ಹಾಗೂ ಸಂಧಾನದ ಬಳಿಕ ದಂಪತಿ ಪರಸ್ಪರ ಒಪ್ಪಿಗೆಯಿಂದ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡು, ಮತ್ತೆ ಒಟ್ಟಾಗಿ ಜೀವನ ನಡೆಸಲು ನಿರ್ಧರಿಸಿದರು.

ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ಒಟ್ಟು 301 ಪ್ರಕರಣಗಳು ಇತ್ಯರ್ಥಗೊಂಡು ₹1 ಕೋಟಿ 59 ಲಕ್ಷ 82 ಸಾವಿರ 163 ಪಾವತಿಸಲಾಗಿದೆ.

ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು, ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ. ಸಿ.ಎಸ್ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಭಾವನಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ವಿವಿಧ ರೀತಿಯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಯಿತು.

ಸಂಧಾನಕಾರರಾಗಿ ವಕೀಲರಾದ ಮೊನಿಕಾ, ಶ್ರೀಕಾಂತ್ ಮತ್ತು ಟಿ.ಎನ್. ನವೀನ್ ಕುಮಾರ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ. ಭಾಸ್ಕರ್ ಹಾಜರಿದ್ದರು.

In English: A National Lok Adalat held at the Sidlaghatta court premises on Saturday settled 301 cases with payouts totalling Rs 1.59 crore, presided over by senior civil judge Mohammed Roshan Shah, principal civil judge Sukanya C.S., and additional civil judge Bhavana. Among the cases resolved through conciliation was a couple who had filed for divorce; after counselling on the importance of family life, they mutually agreed to reconcile and continue their married life together.

ಜಿಲ್ಲೆಯಲ್ಲಿ ಈ ಹಿಂದೆ ನಡೆದಿದ್ದ ಇಂತಹುದೇ ಕಾರ್ಯಕ್ರಮದ ಬಗ್ಗೆ ಲೋಕ್ ಅದಾಲತ್‌ನಲ್ಲಿ 115 ಪ್ರಕರಣ ಇತ್ಯರ್ಥ ಎಂಬ ವರದಿಯನ್ನೂ ಓದಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Silk

Related news

- Advertisement -