Home News ಜುಲೈ 11ರಂದು ರಾಷ್ಟ್ರೀಯ ಲೋಕ್ ಅದಾಲತ್; ರಾಜಿ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಜುಲೈ 11ರಂದು ರಾಷ್ಟ್ರೀಯ ಲೋಕ್ ಅದಾಲತ್; ರಾಜಿ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ

0
Sidlaghatta National Lok Adalat July 11 Preparatory Meeting

Sidlaghatta : ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ವ್ಯಾಜ್ಯಗಳನ್ನು ಸೌಹಾರ್ದಯುತವಾಗಿ ಹಾಗೂ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ಲೋಕ್ ಅದಾಲತ್ ಅತ್ಯುತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಹೇಳಿದರು.

ನಗರದ ನ್ಯಾಯಾಲಯದ ಸಭಾಂಗಣದಲ್ಲಿ ಮಂಗಳವಾರ ಜುಲೈ 11ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್ ಸಂಬಂಧ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲೋಕ್ ಅದಾಲತ್‌ನಲ್ಲಿ ರಾಜಿ ಮಾಡಿಕೊಳ್ಳಬಹುದಾದ ನಾಗರಿಕ, ಬ್ಯಾಂಕ್ ಸಾಲ, ಹಣ ವಸೂಲಿ, ಚೆಕ್ ಬೌನ್ಸ್, ಮೋಟಾರು ವಾಹನ ಅಪಘಾತ ಪರಿಹಾರ, ಕೌಟುಂಬಿಕ ವಿವಾದ ಸೇರಿದಂತೆ ವಿವಿಧ ಪ್ರಕರಣಗಳನ್ನು ಉಭಯ ಪಕ್ಷಗಳ ಪರಸ್ಪರ ಒಪ್ಪಿಗೆಯ ಮೇರೆಗೆ ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು.

ಸಾಮಾನ್ಯ ನ್ಯಾಯಾಂಗ ಪ್ರಕ್ರಿಯೆಗೆ ಹೋಲಿಸಿದರೆ ಲೋಕ್ ಅದಾಲತ್‌ನಲ್ಲಿ ಪ್ರಕರಣಗಳು ಕಡಿಮೆ ಅವಧಿಯಲ್ಲಿ ಇತ್ಯರ್ಥವಾಗುವುದರಿಂದ ಸಮಯ ಮತ್ತು ಹಣ ಎರಡನ್ನೂ ಉಳಿತಾಯ ಮಾಡಬಹುದು. ಅಲ್ಲದೆ, ನ್ಯಾಯಾಲಯ ಶುಲ್ಕ ಮರುಪಾವತಿ ಸೇರಿದಂತೆ ಕಾನೂನಿನಲ್ಲಿ ಲಭ್ಯವಿರುವ ಸೌಲಭ್ಯಗಳನ್ನೂ ಪಕ್ಷಕಾರರು ಪಡೆಯಬಹುದು ಎಂದು ವಿವರಿಸಿದರು.

ಜುಲೈ 11ರಂದು ನಡೆಯುವ ಲೋಕ್ ಅದಾಲತ್‌ನಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ. ವಕೀಲರು, ಬ್ಯಾಂಕ್ ಅಧಿಕಾರಿಗಳು, ವಿವಿಧ ಇಲಾಖೆಗಳ ಪ್ರತಿನಿಧಿಗಳು ಹಾಗೂ ಪಕ್ಷಕಾರರು ಪರಸ್ಪರ ಸಹಕಾರ ನೀಡುವ ಮೂಲಕ ಲೋಕ್ ಅದಾಲತ್ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶೆ ಸಿ.ಎಸ್.ಸುಕನ್ಯಾ, ಅಪರ ಸಿವಿಲ್ ನ್ಯಾಯಾಧೀಶೆ ಭಾವನಾ, ಸರ್ಕಾರಿ ಸಹಾಯಕ ಅಭಿಯೋಜಕರಾದ ರೂಪಾ, ಮೊಹಮ್ಮದ್ ಖಾಜಾ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್, ಹಿರಿಯ ವಕೀಲ ಎಂ.ಪಾಪಿರೆಡ್ಡಿ ಹಾಜರಿದ್ದರು.

In English: A National Lok Adalat will be held at the Sidlaghatta court hall on July 11, 2026. Senior Civil Judge Mohammed Roshan Shah, chairing a preparatory meeting, said compoundable civil, bank loan, money recovery, cheque bounce, motor accident compensation and family dispute cases can be settled quickly by mutual consent, saving litigants time and money, with court-fee refunds available. Judges C.S. Sukanya and Bhavana, prosecutors, and Bar Association office-bearers attended.

FAQ

ಲೋಕ್ ಅದಾಲತ್‌ನಲ್ಲಿ ಯಾವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು? ರಾಜಿ ಮಾಡಿಕೊಳ್ಳಬಹುದಾದ ನಾಗರಿಕ, ಬ್ಯಾಂಕ್ ಸಾಲ, ಹಣ ವಸೂಲಿ, ಚೆಕ್ ಬೌನ್ಸ್, ಮೋಟಾರು ವಾಹನ ಅಪಘಾತ ಪರಿಹಾರ ಹಾಗೂ ಕೌಟುಂಬಿಕ ವಿವಾದ ಪ್ರಕರಣಗಳನ್ನು ಉಭಯ ಪಕ್ಷಗಳ ಒಪ್ಪಿಗೆಯ ಮೇರೆಗೆ ಇತ್ಯರ್ಥಪಡಿಸಿಕೊಳ್ಳಬಹುದು.

ರಾಷ್ಟ್ರೀಯ ಲೋಕ್ ಅದಾಲತ್ ಯಾವಾಗ, ಎಲ್ಲಿ ನಡೆಯಲಿದೆ? ಜುಲೈ 11, 2026ರಂದು ಶಿಡ್ಲಘಟ್ಟ ನಗರದ ನ್ಯಾಯಾಲಯದ ಸಭಾಂಗಣದಲ್ಲಿ ನಡೆಯಲಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version