Home News ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ 11 ನೇ ರಾಷ್ಟ್ರೀಯ ಮತದಾರರ ದಿನಾಚರಣೆ

ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ 11 ನೇ ರಾಷ್ಟ್ರೀಯ ಮತದಾರರ ದಿನಾಚರಣೆ

0
National Voters Day Celebration Taluk Office Sidlaghatta

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಸೋಮವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ಮತ್ತು ಕಂದಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ 11 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ಆರ್.ಮಂಜುನಾಥ್ ಮಾತನಾಡಿದರು.

ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಹೊಣೆಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿಯೇ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

 ಪ್ರತಿ ಪ್ರಜೆಯೂ ತನ್ನನ್ನು ಆಳುವ ಪ್ರತಿನಿಧಿಯನ್ನು ಆಯ್ಕೆಮಾಡಲು ಇರುವ ವ್ಯವಸ್ಥೆಯೇ ಮತದಾನ. ಪ್ರಜಾತಂತ್ರ ದೇಶದ ಪ್ರಜೆಗಳ ಪ್ರಮುಖ ಹಕ್ಕು ಇದು. ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ತಾವೇ ಆಯ್ಕೆ ಮಾಡಿ ಕಳಿಸಲು ಮತದಾನ ಎಂಬ ಪ್ರಕ್ರಿಯೆ ಬೇಕು. ದೇಶಕ್ಕೆ ಒಳಿತುಮಾಡುವ ನಾಯಕನನ್ನು ಚುನಾಯಿಸುವುದು ಪ್ರತಿಯೊಬ್ಬ ಪ್ರಜೆಯ ಜವಾಬ್ದಾರಿ ಎಂದರು.

 ಯುವಜನತೆ ಪ್ರತಿ ವರ್ಷ ನಡೆಯುವ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಮತದಾರರಾಗಿ ನೋಂದಾವಣೆಗೊಳ್ಳಬೇಕು. ಪ್ರಜಾಪ್ರಭುತ್ವ ಬಲಗೊಳ್ಳಬೇಕಾದರೆ ಎಲ್ಲರ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ನಮ್ಮ ದೇಶ ಅಭಿವೃದ್ಧಿಯಾಗಬೇಕಾದರೆ, ನಾವು ನಮ್ಮ ಆಯ್ಕೆಯನ್ನು ಅಮೂಲ್ಯ ಮತದಾನದ ಮೂಲಕ ವ್ಯಕ್ತಪಡಿಸಬೇಕು ಎಂದು ಹೇಳಿದರು.

 “ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ” ಎಂದು ಈ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

 ಉತ್ತಮವಾಗಿ ಮತದಾನ ಪಟ್ಟಿ ಪರಿಷ್ಕರಣೆ ಕಾರ್ಯ ನೆರವೇರಿಸಿದ ಮತಗಟ್ಟೆ ಅಧಿಕಾರಿಗಳಿಗೆ ಪ್ರಶಂಸಾ ಪತ್ರವನ್ನು ನೀಡಲಾಯಿತು.

 ಪ್ರದಾನ ಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್.ಎ.ಪಚ್ಚಾಪುರೆ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಚಂದ್ರಶೇಖರಗೌಡ, ಕಾರ್ಯದರ್ಶಿ ಎಂ.ಬಿ.ಲೋಕೇಶ್, ತಹಶೀಲ್ದಾರ್ ರಾಜೀವ್, ತಾಲ್ಲೂಕು ಪಂಚಾಯಿತಿ ಇಓ ಚಂದ್ರಕಾಂತ್ ಹಾಜರಿದ್ದರು. 

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version