Home News ನರೇಗಾ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯಿತಿ CEO

ನರೇಗಾ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯಿತಿ CEO

0

ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೇಗಾ ಕಾಮಗಾರಿಗಳನ್ನು ಜಿಲ್ಲಾ ಪಂಚಾಯಿತಿ ಸಿಇಒ ಫೌಜಿಯಾ ತರನ್ನುಮ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

 ತಾಲ್ಲೂಕಿನ ಹೊಸಪೇಟೆ, ಜಂಗಮಕೋಟೆ, ಜೆ.ವೆಂಕಟಾಪುರ ಮುಂತಾದ ಗ್ರಾಮ ಪಂಚಾಯಿತಿಗಳಲ್ಲಿನ ನರೇಗಾ ಕಾಮಗಾರಿಗಳನ್ನು ವೀಕ್ಷಿಸಿ, ಕಾಮಗಾರಿಗಳನ್ನು ಗುಣಮಟ್ಟ ಕಾಯ್ದುಕೊಂಡು ತ್ವರಿತವಾಗಿ ಕಾಮಗಾರಿ ನಡೆಸುವಂತೆ ಸೂಚಿಸಿದರು.

 ಚೊಕ್ಕಂಡಹಳ್ಳಿಯ ಕಲ್ಯಾಣಿ, ಎದ್ದಲತಿಪ್ಪೇನಹಳ್ಳಿಯ ಕಲ್ಯಾಣಿ, ಹೊಸಪೇಟೆ ಗ್ರಾಮದ ಸಂತೆ ಮೈದಾನ, ಹೊಸಪೇಟೆ ಗ್ರಾಮ ಪಂಚಾಯಿತಿಯಲ್ಲಿ ಕೊರೊನಾ ತಡೆಯಲು ಕೈಗೊಂಡಿರುವ ಮುನ್ನೆಚ್ಚರಿಕೆಗಳು, ಸುಗಟೂರು ಸರ್ಕಾರಿ ಶಾಲೆ, ಜಂಗಮಕೋಟೆ ನಾಡಕಚೇರಿ, ಅಲ್ಲಿನ ಮಳೆಕೊಯ್ಲು ಕಾಮಗಾರಿ, ಹೊಸಪೇಟೆಯಲ್ಲಿ ರೈತರು ನರೇಗಾ ಯೋಜನೆಯಡಿ ಬೆಳೆದ ಹಿಪ್ಪುನೇರಳೆ ಸೊಪ್ಪು, ಮಲ್ಲೇನಹಳ್ಳಿಯ ಕಲ್ಯಾಣಿ ಕಾಮಗಾರಿಗಳನ್ನು ಪರಿಶೀಲಿಸಿದರು.

 ತಾಲ್ಲೂಕು ಪಂಚಾಯಿತಿ ಇಒ ಶಿವಕುಮಾರ್, ಪಿಡಿಒ ಗಳು ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

error: Content is protected !!