Home News ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ತಡೆಗಟ್ಟಲು ಕಠಿಣ ಕಾನೂನುಗಳನ್ನು ರೂಪಿಸಲು ಒತ್ತಾಯ

ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ತಡೆಗಟ್ಟಲು ಕಠಿಣ ಕಾನೂನುಗಳನ್ನು ರೂಪಿಸಲು ಒತ್ತಾಯ

0
Sidlaghatta NSUI Demand Strict Rules for Rape Culprit Mysore

ಎನ್‌ಎಸ್‌ಯುಐ ಪದಾಧಿಕಾರಿಗಳ ನೇತೃತ್ವದಲ್ಲಿ ಶಿಡ್ಲಘಟ್ಟ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಪ್ರಧಾನ ಕಾರ್ಯದರ್ಶಿ ಎಸ್.ಆರ್.ಪ್ರಸನ್ನಕುಮಾರ್ ಮಾತನಾಡಿದರು.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಇಡೀ ದೇಶವೇ ತಲೆ ತಗ್ಗಿಸುವ ಘಟನೆಯಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿಸಿ ಗಲ್ಲಿಗೇರಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಸರ್ಕಾರ ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಬಿ.ಎಸ್.ರಾಜೀವ್ ರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ತಾಲ್ಲೂಕು ಉಪಾಧ್ಯಕ್ಷ ಅಫ್ರಿದ್‌ಪಾಷ, ಪದಾಧಿಕಾರಿಗಳಾದ ಬಿ.ಹರೀಶ್, ಎಸ್.ವಿ.ನಂದೀಶ್ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version