Sidlaghatta : ಸಮಾಜದಲ್ಲಿ ಸಮಾನತೆ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಶ್ರೀ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಅವರ ಕೊಡುಗೆ ಅಪಾರವಾಗಿದೆ ಎಂದು ತಹಶೀಲ್ದಾರ್ ಗಗನಸಿಂಧು ಹೇಳಿದರು.
In English: Sidlaghatta Tahsildar Gaganasindhu said the contributions of social reformers Nuliya Chandayya and Brahmasri Narayana Guru toward equality, brotherhood and humane values remain immense, speaking at a jayanti observance held at the taluk office on Friday.
ನಗರದ ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀ ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿದ್ದ ಅಸಮಾನತೆ, ಜಾತಿ ತಾರತಮ್ಯ ಮತ್ತು ಮೂಢನಂಬಿಕೆಗಳ ವಿರುದ್ಧ ಇಬ್ಬರೂ ಮಹನೀಯರು ತಮ್ಮದೇ ಆದ ರೀತಿಯಲ್ಲಿ ಜಾಗೃತಿ ಮೂಡಿಸಿದ್ದರು ಎಂದರು.
ಮಹನೀಯರ ಜಯಂತಿಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರು ಪ್ರತಿಪಾದಿಸಿದ ವಿಚಾರಧಾರೆ ಮತ್ತು ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಾಂತಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯವನ್ನು ಸಾಕಾರಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಐ.ಎನ್.ಟಿ.ಯು.ಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎನ್. ಮುನೀಂದ್ರ, ವೇಣು, ಅಶ್ವತ್ಥಪ್ಪ, ಶಂಕರ್ ಸೇರಿದಂತೆ ತಾಲ್ಲೂಕು ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

