ಒನಕೆ ಓಬವ್ವ ಜಯಂತಿ: ಹೆಣ್ಣುಮಕ್ಕಳಿಗೆ ಮನೆಯಿಂದಲೇ ಧೈರ್ಯ ತುಂಬಿ; ಆಹ್ವಾನಿಸಿಲ್ಲವೆಂದು ಮುಖಂಡರ ಅಸಮಾಧಾನ

Officials and community representatives paying floral tribute before a garlanded portrait of Onake Obavva on a table with fruits in the taluk office hall during Onake Obavva Jayanti, Sidlaghatta

Sidlaghatta : ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರೇಡ್-2 ತಹಸೀಲ್ದಾರ್ ಕೆ.ಎನ್.ಎಂ. ಮಂಜುನಾಥ್, ಹೆಣ್ಣುಮಕ್ಕಳು ಅಬಲೆಯರಲ್ಲ, ಸಬಲೆಯರು ಎಂಬ ಆತ್ಮವಿಶ್ವಾಸವನ್ನು ಮನೆಯಿಂದಲೇ ತುಂಬಬೇಕು ಎಂದು ಹೇಳಿದರು.

ತಾಲ್ಲೂಕು ರಾಷ್ಟ್ರೀಯ ಹಾಗೂ ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ವೀರರಾಣಿ ಒನಕೆ ಓಬವ್ವ ಜಯಂತಿ ನಡೆಯಿತು. ಓಬವ್ವ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಲಾಯಿತು.

ಸಂಪ್ರದಾಯ ಮತ್ತು ಕಾನೂನಿನ ಪ್ರಕಾರ ಹೆಣ್ಣುಮಕ್ಕಳಿಗೆ ಸಮಾನ ಅವಕಾಶ ಕಲ್ಪಿಸಲಾಗಿದೆ. ಆದರೆ ಹಿಂಜರಿಕೆ, ಶಿಕ್ಷಣ ಮತ್ತು ಮಾರ್ಗದರ್ಶನದ ಕೊರತೆ, ಅವಕಾಶಗಳ ಕೊರತೆಯಿಂದ ಅವರು ಅನೇಕ ಕ್ಷೇತ್ರಗಳಲ್ಲಿ ಹಿಂದುಳಿದಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು; ಶಾಲೆ-ಕಾಲೇಜುಗಳಲ್ಲೂ ಆತ್ಮಸ್ಥೈರ್ಯ ತುಂಬುವ ಕೆಲಸ ಆಗಬೇಕು ಎಂದರು.

ಕೋಟೆ ಕಾವಲುಗಾರನ ಪತ್ನಿಯಾಗಿ, ಕೋಟೆಗೆ ಆಪತ್ತು ಎದುರಾದಾಗ ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಶತ್ರುಗಳನ್ನು ಎದುರಿಸಿದ ಓಬವ್ವ ನಾಡಿನ ಹೆಣ್ಣುಮಕ್ಕಳಿಗೆ ಸ್ಫೂರ್ತಿಯಾಗಬೇಕು ಎಂದು ಅವರು ಹೇಳಿದರು.

ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಬಿ. ತ್ಯಾಗರಾಜ್, ರೇಷ್ಮೆ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ, ಜಿಲ್ಲಾ ಸಫಾಯಿ ಕರ್ಮಚಾರಿ ಸಮಿತಿ ಸದಸ್ಯ ಲಕ್ಷ್ಮಣರಾಜು, ಸಮಾಜ ಕಲ್ಯಾಣ ಇಲಾಖೆಯ ಜಗದೀಶ್, ಪಶುವೈದ್ಯಾಧಿಕಾರಿ ಡಾ. ಶ್ರೀನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಜಯಂತಿಗೆ ಛಲವಾದಿ ಸಮುದಾಯದ ಮುಖಂಡರನ್ನು ಆಹ್ವಾನಿಸಿಲ್ಲ, ಪೂರ್ವಭಾವಿ ಸಭೆಯನ್ನೂ ಕರೆದಿಲ್ಲ, ಕೇವಲ ಭಾವಚಿತ್ರ ಇಟ್ಟು ಪೂಜೆ ಮಾಡಿ ಕಾರ್ಯಕ್ರಮ ಮುಗಿಸಲಾಗಿದೆ ಎಂದು ಸಮುದಾಯದ ಮುಖಂಡರು ತಾಲ್ಲೂಕು ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ತಹಸೀಲ್ದಾರ್ ಸೇರಿದಂತೆ ಬಹುತೇಕ ಇಲಾಖೆ ಅಧಿಕಾರಿಗಳು ಗೈರಾಗಿದ್ದರು ಎಂದೂ ಆಕ್ಷೇಪಿಸಿದರು.

ಕಳೆದ ವರ್ಷವೂ ಇದೇ ರೀತಿ ಆದಾಗ, ಮುಂದಿನ ವರ್ಷ ಉತ್ತಮವಾಗಿ ಆಚರಿಸುವ ಭರವಸೆ ನೀಡಲಾಗಿತ್ತು; ಈ ವರ್ಷವೂ ಅದೇ ನಿರ್ಲಕ್ಷ್ಯ ಮುಂದುವರಿದಿದೆ ಎಂದು ಅವರು ಆರೋಪಿಸಿದರು. ಓಬವ್ವ ಅವರು ಒಂದು ಸಮುದಾಯಕ್ಕೆ ಸೀಮಿತರಲ್ಲ; ಎಲ್ಲ ಸಮುದಾಯ ಮತ್ತು ಸಂಘ-ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಯಂತಿ ಆಚರಿಸಬೇಕಿತ್ತು ಎಂದು ಹೇಳಿದರು.

ತಹಸೀಲ್ದಾರ್ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಬೇರೆಡೆಗೆ ವರ್ಗಾಯಿಸಬೇಕು ಎಂದು ಮುಖಂಡರು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು. ನಂತರ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಜಯಂತಿಯನ್ನು ಆಚರಿಸಲಾಯಿತು.

ಸಂಬಂಧಿತ ಸುದ್ದಿ: ವೀರರಾಣಿ ಒನಕೆ ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮ | ಒನಕೆ ಓಬವ್ವ, ಕನಕ ಜಯಂತಿಯ ಪೂರ್ವಭಾವಿ ಸಭೆ

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

ಇದನ್ನೂ ಓದಿ