Home News ಶ್ರೀ ಪಾರ್ವತಾಂಬ ಸಮೇತ ಶ್ರೀ ಸೋಮೇಶ್ವರಸ್ವಾಮಿಯ ಬ್ರಹ್ಮರಥೋತ್ಸವ

ಶ್ರೀ ಪಾರ್ವತಾಂಬ ಸಮೇತ ಶ್ರೀ ಸೋಮೇಶ್ವರಸ್ವಾಮಿಯ ಬ್ರಹ್ಮರಥೋತ್ಸವ

0
Sidlaghatta Gudihalli Parvatamba Someshwaraswamy Brahmarathotsava

Gudihalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಗುಡಿಹಳ್ಳಿಯ ಶ್ರೀ ಪಾರ್ವತಾಂಬ ಸಮೇತ ಶ್ರೀಸೋಮೇಶ್ವರಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವವನ್ನು ಭಾನುವಾರ ಶ್ರದ್ಧಾ ಭಕ್ತಿಯಿಂದ ನೆರವೇರಿಸಲಾಯಿತು. ಸುತ್ತ ಮುತ್ತಲ ಗ್ರಾಮಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಬ್ರಹ್ಮರಥೋತ್ಸವಕ್ಕೆ ಸಾಕ್ಷಿಯಾದರು.

ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡಿಹಳ್ಳಿ ಗ್ರಾಮದ ಶ್ರೀ ಪಾರ್ವತಾಂಬ ಸಮೇತ ಶ್ರೀ ಸೋಮೇಶ್ವರಸ್ವಾಮಿ ದೇವಾಲಯದ 15ನೇ ವರ್ಷದ ಬ್ರಹ್ಮ ರಥೋತ್ಸವದ ಅಂಗವಾಗಿ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಿ ಸಿಂಗರಿಸಿ ವಿಶೇಷ ಪೂಜೆ, ಹೋಮ, ಹವನ, ಕಳಶ ಪೂಜೆ, ಗಣಪತಿ ಪೂಜೆ ನಡೆಸಿ ಮಹಾ ಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು.

ಗುಡಿಹಳ್ಳಿ ಮತ್ತು ಸುತ್ತಲಿನ ಗ್ರಾಮಗಳ ಹೆಣ್ಣುಮಕ್ಕಳು ದೀಪಗಳನ್ನು ಹೊತ್ತು ಮೆರವಣಿಗೆ ನಡೆಸಿ ದೇವರಿಗೆ ಆರತಿ ಎತ್ತಿದರು. ವೀರಗಾಸೆ ಕಲಾತಂಡ ಮೆರವಣಿಗೆಗೆ ಮೆರುಗನ್ನು ತಂದಿತ್ತು. ರಥೋತ್ಸವದಲ್ಲಿ ನಗರ ಹಾಗೂ ಸುತ್ತಮುತ್ತಲಿನ ಸಾವಿರಾರು ಗ್ರಾಮಸ್ಥರು ಭಾಗಿಯಾಗಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version