23.1 C
Sidlaghatta
Saturday, October 1, 2022

ಇಂಧನ ಹಾಗೂ ಅಗತ್ಯ ಸಾಮಗ್ರಿಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಶಿಡ್ಲಘಟ್ಟ ನಗರ, ಜಂಗಮಕೋಟೆ ಹಾಗೂ ದಿಬ್ಬೂರಹಳ್ಳಿ ಗ್ರಾಮಗಳಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಇಂಧನ ಹಾಗೂ ಅಗತ್ಯ ಸಾಮಗ್ರಿಗಳ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಮಾಜಿ ಸಚಿವ ಡಿ.ಬಿ.ಜಯಚಂದ್ರ ಮಾತನಾಡಿದರು.

ಕೆಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕಾರ್ಪೊರೇಟ್ ಕಂಪೆನಿಗಳಿಗೆ ಅನುಕೂಲವಾಗುವಂತೆ ಆಡಳಿತವನ್ನು ನಡೆಸುತ್ತಿದೆ. ದೇಶದ ಬಡವರು, ಕೂಲಿ ಕಾರ್ಮಿಕರು, ರೈತರನ್ನು ಬಿದಿ ಪಾಲು ಮಾಡುವ ಹುನ್ನಾರವನ್ನು ಕೇಂದ್ರ ಸರ್ಕಾರ ನಡೆಸಿದೆ.

ಪೆಟ್ರೋಲ್, ಡೀಸಲ್, ಅಡುಗೆ ಅನಿಲಗಳ ಬೆಲೆ ಏರಿಕೆ ಮಾಡುವ ಮೂಲಕ ದೇಶದ ಜನಸಾಮಾನ್ಯರ ಜೀವನದೊಂದಿಗೆ ಮೋದಿ ಸರ್ಕಾರ ಚಲ್ಲಾಟವಾಡುತ್ತಿದೆ. ಕಾರ್ಪೊರೇಟ್ ಕಂಪೆನಿಗಳಿಗೆ ಅನುಕೂಲವಾಗುವಂತೆ ಆಡಳಿತ ನಡೆಸುತ್ತಾ ಅವರ ಕೈಗೊಂಬೆಯಾಗಿದೆ ಕೇಂದ್ರ ಸರ್ಕಾರ. ಬಡವರ, ಕಾರ್ಮಿಕರ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ.

ಭ್ರಷ್ಟಾಚಾರ ತಾಂಡವವಾಡುತ್ತಿದೆ. ಕೋವಿಡ್ ನಿಂದ ಮೃತಪಟ್ಟಿರುವವರದ್ದು ಕೇವಲ ಸಾವಲ್ಲ ಇದು ಸರ್ಕಾರದ ಅಸಮರ್ಪಕತೆಯಿಂದ ಆದ ಸಾವು. ಒಂದು ರೀತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆಸಿರುವ ಕಗ್ಗೊಲೆ. ಇದಕ್ಕೆ ಕ್ಷಮೆಯಿಲ್ಲ. ಇವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ದೇಶಕ್ಕೆ ಉಳಿಗಾಲವಿಲ್ಲ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಪೆಟ್ರೋಲ್ ಬೆಲೆ 70 ರೂ ಡೀಸಲ್ ಬೆಲೆ 58 ರೂ ಇತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಜನರ ಹಿತಕ್ಕಿಂತ ಬಂಡವಾಳಶಾಹಿಗಳ ಹಿತರಕ್ಷಣೆಗೆ ಬದ್ಧವಾಗಿದೆ. ನೀರವ್ ಮೋದಿ, ಆದಾನಿ, ಅಂಬಾನಿಗಳ ಕೈಗೊಂಬೆಯಾಗಿದೆ ಸರ್ಕಾರ. ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದಾಗಿ ಬಡವರು ತತ್ತರಿಸಿ ಹೋಗಿದ್ದಾರೆ. ಮುಂದಿನ ದಿನಗಳಲ್ಲಿ ಜನರು ಇವರಿಗೆ ತಕ್ಕ ಪಾಠ ಕಲಿಸಬೇಕು ಎಂದರು.

 ಶಾಸಕ ವಿ.ಮುನಿಯಪ್ಪ ಮಾತನಾಡಿ, ಕೋವಿಡ್ ಮಹಾಮಾರಿಯಂತಹ ಸಂದರ್ಭದಲ್ಲಿಯೂ ಸರ್ಕಾರ ಜನಸಾಮಾನ್ಯರ ನೆರವಿಗೆ ಬರುವಲ್ಲಿ ನಿರ್ಲಕ್ಷ್ಯ ತೋರಿದೆ. ಈ ಸಂಕಷ್ಟ ಕಾಲದಲ್ಲಿಯೂ ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಹೆಚ್ಚಿಸಿದೆ. ಪೆಟ್ರೋಲ್, ಡೀಸಲ್ ಬೆಲೆ ಏರಿಸಿ ಸಂಗ್ರಹಿಸಿರುವ ಹಣದಿಂದ ಸಂಕಷ್ಟದಲ್ಲಿರುವ ಜನರಿಗೆ ನೆರವನ್ನು ನೀಡಬೇಕು. ಮಧ್ಯಮವರ್ಗ, ಸಣ್ಣ ವ್ಯಾಪಾರಿಗಳು ನಷ್ಟ ಅನುಭವಿಸಿದ್ದಾರೆ. ಬ್ಯಾಂಕ್ ಸಾಲಗಳ ಬಡ್ಡಿ, ಸಾಲದ ಕಂತನ್ನು ಮನ್ನಾ ಮಾಡಬೇಕೆಂದು ಒತ್ತಾಯಿಸಿದರು.

 ಈ ಕೊರೊನಾ ಸಂದರ್ಭದಲ್ಲಿ ಲಸಿಕೆಗೆ, ಬೆಡ್ ಗೆ, ಆಮ್ಲಜನಕಕ್ಕೆ, ಕೊನೆಗೆ ಸ್ಮಶಾನದಲ್ಲೂ ಜನ ಸರದಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದರು. ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಇಂದು ಜನರ ಸಾಮಾನ್ಯರ ಬದುಕಿಗೆ ಕಂಟಕಪ್ರಾಯವಾಗಿದೆ ಎಂದರು.

 ಕಾಂಗ್ರೆಸ್ ಪಕ್ಷದ ಎಂ.ಡಿ.ಮುಜಾಹಿದ್ ಪಾಷ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದಯ ಶಂಕರ್, ಕಾರ್ಯದರ್ಶಿ ಕಾರ್ತಿಕ್ ರೆಡ್ಡಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮುದಾಸಿರ್, ಸಾಹಿದ್, ಡಿ.ವಿ.ವೆಂಕಟೇಶ್, ಬೆಳ್ಳೂಟಿ ವೆಂಕಟೇಶ್, ಮೂತ್ತೂರು ವೆಂಕಟೇಶ್, ಮೇಲೂರು ಗಿರೀಶ್, ವಿಜಯ್, ರಾಜು ನಾಯಕ್ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here