Home News ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪೆಟ್ರೋಲ್ ಪಂಪ್ ಭಸ್ಮ

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪೆಟ್ರೋಲ್ ಪಂಪ್ ಭಸ್ಮ

0
Sidlaghatta Petrol Pump Electricity Short circuit

ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಸಮೀಪ ಇರುವ ಭಾರತ್ ಪೆಟ್ರೋಲ್ ಬಂಕ್‌ನ ಪೆಟ್ರೋಲ್ ಪಂಪ್‌ನಲ್ಲಿ ಶುಕ್ರವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಪೆಟ್ರೋಲ್ ಪಂಪ್ ಮಾಡುವ ಮಿಷನರಿಗಳು ಸುಟ್ಟು ಕರಕಲಾಗಿದೆ.

 ಪಂಪ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಬಂಕ್‌ನಲ್ಲಿ ಮಲಗಿದ್ದ ಸಿಬ್ಬಂದಿ ಎಚ್ಚೆತ್ತು ಬೆಂಕಿಯನ್ನು ನಂದಿಸುವ ಕೆಲಸ ಮಾಡಿದ್ದಾರಲ್ಲದೆ, ಅಗ್ನಿಶಾಮಕ ಸಿಬ್ಬಂದಿಗೂ ವಿಷಯ ಮುಟ್ಟಿಸಿದ್ದಾರೆ. ಕೂಡಲೆ ಸಕಾಲಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸುವ ಕಾರ‍್ಯ ಮಾಡಿದ್ದಾರೆ. ಬಂಕ್‌ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್ ಇದ್ದು ಹೆಚ್ಚಿನ ಅನಾಹುತ ತಪ್ಪಿದೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version