Home News ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ POCSO ಪ್ರಕರಣ

ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ವಸತಿ ಶಾಲೆ ಪ್ರಾಂಶುಪಾಲರ ವಿರುದ್ಧ POCSO ಪ್ರಕರಣ

0
Representative graphic on POCSO and child safety with Childline 1098 and emergency 112 helpline numbers

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಸತಿ ಶಾಲೆಯೊಂದರ ಒಂಬತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲರ ವಿರುದ್ಧ POCSO ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಓದು ಬರಹ ಕಲಿಸುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕೊಠಡಿಗೆ ಕರೆಸಿಕೊಳ್ಳುತ್ತಿದ್ದ ಪ್ರಾಂಶುಪಾಲರು, ಆಕೆಯ ವಿರೋಧದ ನಡುವೆಯೂ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಬಾಲಕಿ ದೂರಿನಲ್ಲಿ ಆರೋಪಿಸಿದ್ದಾಳೆ.

ಒಮ್ಮೆ ಬಾಲಕಿ ಕೊಠಡಿಯಿಂದ ಅಳುತ್ತಾ ಹೊರಬಂದಿದ್ದನ್ನು ಗಮನಿಸಿದ ಶಿಕ್ಷಕಿಯೊಬ್ಬರು ಆಕೆಯನ್ನು ವಿಚಾರಿಸಿದಾಗ, ಪ್ರಾಂಶುಪಾಲರ ವರ್ತನೆಯ ಬಗ್ಗೆ ತಿಳಿಸಿದ್ದಾಳೆ ಎನ್ನಲಾಗಿದೆ.

ಬಳಿಕ ಬಾಲಕಿ ನೀಡಿದ ದೂರಿನ ಮೇರೆಗೆ ದಿಬ್ಬೂರಹಳ್ಳಿ ಪೊಲೀಸರು ಪ್ರಾಂಶುಪಾಲರ ವಿರುದ್ಧ POCSO ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಸಂತ್ರಸ್ತ ಬಾಲಕಿಗೆ ಬಾಲಕಿಯರ ಬಾಲಮಂದಿರದಲ್ಲಿ ಆಶ್ರಯ ಕಲ್ಪಿಸಲಾಗಿದೆ.

ಮಕ್ಕಳ ಮೇಲಿನ ದೌರ್ಜನ್ಯ ಕಂಡುಬಂದರೆ ಯಾರನ್ನು ಸಂಪರ್ಕಿಸಬೇಕು?

ಮಕ್ಕಳ ಮೇಲಿನ ದೌರ್ಜನ್ಯ ಕಂಡುಬಂದರೆ ಮಕ್ಕಳ ಸಹಾಯವಾಣಿ 1098 ಅಥವಾ ತುರ್ತು ಸಂಖ್ಯೆ 112ಕ್ಕೆ ಕರೆ ಮಾಡಬಹುದು.

ಮಕ್ಕಳ ಹಕ್ಕುಗಳು ಹಾಗೂ ಸುರಕ್ಷತೆ ಕುರಿತು ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಅತ್ಯಗತ್ಯ: ನ್ಯಾಯಾಧೀಶ ಮೊಹಮದ್ ರೋಷನ್ ಷಾ ಹಾಗೂ ದುಶ್ಚಟಗಳಿಂದ ದೂರವಿದ್ದು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ: ಸರ್ಕಲ್ ಇನ್ ಸ್ಪೆಕ್ಟರ್ ಆನಂದ್ ಕುಮಾರ್ ವರದಿಗಳನ್ನೂ ಓದಿ.

In English: A case has been registered under the POCSO (Protection of Children from Sexual Offences) Act against the principal of a residential school under the Dibburahalli police station limits in Sidlaghatta taluk, on a complaint that he sexually harassed a Class 9 student. The girl alleged in her complaint that the principal called her to his room on the pretext of teaching her and harassed her despite her resistance; a teacher who saw her come out of the room crying asked her about it. Dibburahalli police registered the case based on the girl’s complaint, and she has been given shelter at a girls’ children’s home. Anyone who sees abuse of children can call Childline 1098 or the emergency number 112.

For Daily Updates WhatsApp ‘HI’ to 7406303366

error: Content is protected !!
Exit mobile version