Home News ವಿಧಾನಪರಿಷತ್‌ ಅಭ್ಯರ್ಥಿ ಅನಿಲ್‌ಕುಮಾರ್ ಪರ ಆಂಜಿನಪ್ಪ(ಪುಟ್ಟು) ಮತಯಾಚನೆ

ವಿಧಾನಪರಿಷತ್‌ ಅಭ್ಯರ್ಥಿ ಅನಿಲ್‌ಕುಮಾರ್ ಪರ ಆಂಜಿನಪ್ಪ(ಪುಟ್ಟು) ಮತಯಾಚನೆ

0
Anjinappa Puttu Congress Election Sidlaghatta

ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಮಾರ್ಗದ ಅಜ್ಜಕದಿರೇನಹಳ್ಳಿ ಬಳಿ ಹಮ್ಮಿಕೊಂಡಿದ್ದ ವಿಧಾನ ಪರಿಷತ್‌ನ ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಪರ ಪ್ರಚಾರ ಕಾರ‍್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ, ಎಸ್‌ಎನ್ ಕ್ರಿಯಾ ಟ್ರಸ್ಟ್ ನ ಅಧ್ಯಕ್ಷ ಆಂಜಿನಪ್ಪ (ಪುಟ್ಟು) ಮಾತನಾಡಿದರು. 

ಈ ದೇಶವನ್ನು ಕಟ್ಟುವಲ್ಲಿ ಕಾಂಗ್ರೆಸ್‌ನ ಪಾತ್ರ ಬಹಳ ಮುಖ್ಯವಾಗಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ತನ್ನದೇ ಆದ ಪಾತ್ರವಹಿಸಿದ ಕಾಂಗ್ರೆಸ್‌ನ ತ್ಯಾಗ ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ, ಈ ವಿಷಯವನ್ನು ಯಾರೂ ಮರೆಯುವಂತಿಲ್ಲ ಎಂದು ಅವರು ತಿಳಿಸಿದರು.

ಅನಿಲ್ ಕುಮಾರ್ ಅವರು ಕಾಂಗ್ರೆಸ್ ಪಕ್ಷದ ಕಟ್ಟಾಳು, ಯುವಕರು, ದೂರದೃಷ್ಟಿಯುಳ್ಳವರಾಗಿದ್ದು ಅವರಿಗೆ ಮೊದಲ ಪ್ರಾಶಸ್ತ್ಯ ಮತ ನೀಡಿ ಅಧಿಕ ಮತಗಳಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ತಾಲ್ಲೂಕಿನ ನಾನಾ ಭಾಗಗಳಿಂದ ಆಗಮಿಸಿದ್ದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಶ್ರೀನಿವಾಸ್, ಪಿಎಲ್‌ಡಿ ಬ್ಯಾಂಕ್ ನಿರ್ದೆಶಕ ನಾರಾಯಣಸ್ವಾಮಿ, ತಲಕಾಯಲಬೆಟ್ಟ ಅಶ್ವತ್ಥಪ್ಪ, ಕರಿಯಪ್ಪನಹಳ್ಳಿ ಮಂಜುನಾಥ್, ಆನೂರು ದೇವರಾಜ್, ನಾರಾಯಣರೆಡ್ಡಿ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version