ಪಿಯು ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ: ವಾಲಿಬಾಲ್, ಹ್ಯಾಂಡ್‌ಬಾಲ್, ಟೇಕ್ವಾಂಡೋದಲ್ಲಿ ಸಾಧನೆ

Sidlaghatta : ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ಮತ್ತು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಸಾಧನೆ ಮಾಡಿದ ತಾಲ್ಲೂಕಿನ ಜಂಗಮಕೋಟೆ ಕ್ರಾಸ್ ನ ಜ್ಞಾನ ಜ್ಯೋತಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಗಾರ್ಜುನ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ.
ಬಾಲಕರ ವಿಭಾಗದ ಕ್ರಾಸ್ ಕಂಟ್ರಿ ಸ್ಪರ್ಧೆಯಲ್ಲಿ ಎನ್. ಚೇತನ್ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಲಿಬಾಲ್ ನಲ್ಲಿ ಎನ್. ನಿಖಿತ್ ಗೌಡ ಮತ್ತು ಟಿ.ಸಿ. ಚರಣ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹ್ಯಾಂಡ್ ಬಾಲ್ ನಲ್ಲಿ ಎಂ. ಅಖಿಲೇಶ್ ರೆಡ್ಡಿ, ಎ.ವಿ. ಧ್ರುವ, ಎನ್. ಚೇತನ್, ಎನ್.ಎಸ್. ಪ್ರಜ್ವಲ್ ಗೌಡ ಹಾಗೂ ಎಚ್.ಆರ್. ಪ್ರೀತಮ್ ಗೌಡ ಅವರ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಟೇಕ್ವಾಂಡೋ ಸ್ಪರ್ಧೆಯಲ್ಲಿ ಉತ್ತಿಶ್ಟ್ ಪ್ರಥಮ ಸ್ಥಾನ ಪಡೆದಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ಗುಂಡು ಎಸೆತ ಸ್ಪರ್ಧೆಯಲ್ಲಿ ಕೆ.ಎಂ. ಜೀವಿಕ, ಟೇಕ್ವಾಂಡೋದಲ್ಲಿ ಎನ್. ಪ್ರತೀಕ್ಷಾ ಪ್ರಥಮ ಸ್ಥಾನ ಗಳಿಸಿದ್ದಾರೆ. ಯೋಗ ಪ್ರದರ್ಶನ ಸ್ಪರ್ಧೆಯಲ್ಲಿ ಎಂ. ಯಶಸ್ವಿನಿ, ಬಿ.ಎನ್. ಗೌರಿ ಹಾಗೂ ಜಾನ್ಹವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಎತ್ತರ ಜಿಗಿತದಲ್ಲಿ ಎಂ. ದಿವ್ಯಶ್ರೀ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರನ್ನು ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳನ್ನು ಗ್ರಾಮೀಣ ವಿದ್ಯಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಕೆ. ಗುಡಿಯಪ್ಪ, ಕಾರ್ಯದರ್ಶಿ ಬಿ.ಎಂ. ರಾಜೀವ್ ಕುಮಾರ್ ಮತ್ತು ಪ್ರಾಂಶುಪಾಲೆ ಪಿ. ಮನುಶ್ರೀ ಅಭಿನಂದಿಸಿದ್ದಾರೆ.
ಸಂಬಂಧಿತ ಸುದ್ದಿ: ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಪ್ರಥಮ ಸ್ಥಾನ: ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ವಿದ್ಯಾರ್ಥಿಗಳ ಆಯ್ಕೆ

For Daily Updates WhatsApp ‘HI’ to 7406303366
Summary in English
Students of Jnana Jyothi PU College at Jangamakote Cross won prizes at the district-level pre-university sports meet held at Nagarjuna College of Engineering and Technology in Bangalore Rural district, and several have been selected for the state-level meet. N. Chetan won the boys’ cross-country; N. Nikhit Gowda and T.C. Charan were selected for state-level volleyball; the handball team finished second. Among the girls, K.M. Jeevika won shot put, N. Prateeksha won taekwondo, and M. Yashaswini, B.N. Gowri and Janhavi won yoga and were selected for the state meet.
Be a reporter
ಊರಿನ ಸುದ್ದಿ, ಫೋಟೋ ಕಳುಹಿಸಿ.
Send news


