ಪೂರ್ಣ ಪುಟ · Open full page
News

ಪ್ರಥಮ ವರ್ಷದ ಪದವಿ ವಿದ್ಯಾಥಿಗಳಿಗೆ ಟ್ಯಾಬ್ ವಿತರಣೆ

V Muniyappa College Students Tablet Distribution

ಶಿಡ್ಲಘಟ್ಟ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ಪ್ರಥಮ ವರ್ಷದ ಪದವಿ ವಿದ್ಯಾಥಿಗಳಿಗೆ ಟ್ಯಾಬ್ ವಿತರಣೆ ಹಾಗೂ ಸ್ಮಾರ್ಟ್ ಕ್ಲಾಸ್ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

ಕೋವಿಡ್ ಇರುವ ಕಾರಣ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಉಚಿತ ಟ್ಯಾಬ್ ವಿತರಿಸುತ್ತಿದ್ದು ವಿದ್ಯಾರ್ಥಿಗಳು ಮನೆಯಲ್ಲಿಯೇ ಇದ್ದು ಆನ್ ಲೈನ್ ತರಗತಿಯ ಶಿಕ್ಷಣ ಪಡೆದುಕೊಳ್ಳುವ ಮೂಲಕ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ರಾಜ್ಯ ಸರ್ಕಾರ ಸಾಕಷ್ಟು ಯೋಜನೆಗಳು ಜಾರಿಗೆ ತಂದಿದ್ದು ಪದವಿ ವಿದ್ಯಾರ್ಥಿಗಳ ಆನ್‌ಲೈನ್ ತರಗತಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರ ಉಚಿತವಾಗಿ ಟ್ಯಾಬ್ ವಿತರಿಸುತ್ತಿದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪ್ರಸಕ್ತ ಪದವಿ ಪ್ರಥಮ ವರ್ಷದ 131 ಮಂದಿ ವಿದ್ಯಾರ್ಥಿಗಳ ಪೈಕಿ 10 ಮಂದಿಗೆ ಮಾತ್ರ ಸಾಂಕೇತಿಕವಾಗಿ ಟ್ಯಾಬ್ ವಿತರಿಸಲಾಗಿದ್ದು ಉಳಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿಯೇ ಟ್ಯಾಬ್ ವಿತರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ.ಜಿ.ಮುರಳಿಆನಂದ್, ನಗರಸಭೆ ಪೌರಾಯಕ್ತ ಶ್ರೀನಿವಾಸ್, ನಗರಠಾಣೆ ಪಿಎಸ್ಸೈ ಸತೀಶ್, ಪ್ರಾಧ್ಯಾಪಕರಾದ ಡಾ.ವಿ.ವೆಂಕಟೇಶ್, ಜಿ.ಕೆ.ರಮೇಶ್, ಕೆ.ಉಮೇಶ್‌ರೆಡ್ಡಿ ಮತ್ತು ಸಿಬ್ಬಂದಿ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

Place

ಅಪಾಯಕಾರಿ ರೀಲ್ಸ್ ಅನುಕರಣೆ ಬೇಡ, ಅಪ್ರಾಪ್ತರಿಗೆ ವಾಹನ ನೀಡಬೇಡಿ: ನ್ಯಾಯಾಧೀಶರ ಎಚ್ಚರಿಕೆ

ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಮಿತಿಗೊಳಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅಪಾಯಕಾರಿ ಸಾಹಸಗಳ ರೀಲ್ಸ್ ಮತ್ತು ವಿಡಿಯೊಗಳನ್ನು ಯಾವುದೇ ಕಾರಣಕ್ಕೂ ಅನುಕರಿಸಬಾರದು ಎಂದು ಹಿರಿಯ ಸಿವಿಲ್…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Exit mobile version