Home News ದ್ವಿತೀಯ ಪಿಯುಸಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನ

ದ್ವಿತೀಯ ಪಿಯುಸಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನ

0
PUC Toppers Dolphin PU College

Sidlaghatta : ಶಿಡ್ಲಘಟ್ಟ ನಗರದ ಡಾಲ್ಫಿನ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ PUC ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಕೈಗಡಿಯಾರ ಮತ್ತು ಪ್ರಮಾಣಪತ್ರವನ್ನು ವಿತರಿಸಿ ಡಾಲ್ಫಿನ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್.ಅಶೋಕ್ ಅವರು ಮಾತನಾಡಿದರು.

ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಪೋಷಕರು ಸಾಕಷ್ಟು ಶ್ರಮಿಸುತ್ತಾರೆ ಮತ್ತು ಹಲವು ತ್ಯಾಗಗಳನ್ನು ಮಾಡುತ್ತಾರೆ. ಅವರ ಆಶೋತ್ತರಗಳನ್ನು ಈಡೇರಿಸುವ ಮೂಲಕ ಉತ್ತಾಮ ಸಾಧಕರಾಗುವ ಗುರಿಯನ್ನು ವಿದ್ಯಾರ್ಥಿಗಳು ಹೊಂದಿರಬೇಕು ಎಂದು ಅವರು ತಿಳಿಸಿದರು.

ಗಂಡು ಹೆಣ್ಣೆಂಬ ಭೇದವಿಲ್ಲದೆ ಈಗ ಸರಿಸಮಾನವಾದ ಅವಕಾಶಗಳಿವೆ. ಜ್ಞಾನವನ್ನು ಪಡೆಯಲು ನಾನಾ ದಾರಿಗಳಿವೆ. ಸ್ಪಂಜಿನಂತೆ ಕಲೆ, ಕೌಶಲ್ಯ ಮತ್ತು ಜ್ಞಾನವನ್ನು ಹೀರಿಕೊಳ್ಳುವ ಮನೋಭಾವವನ್ನು ಬೆಳೆಸಿಕೊಳ್ಳಿ. ವಿವಿಧ ಕೌಶಲಗಳನ್ನು ನಿಮ್ಮದಾಗಿಸಿಕೊಂಡಾಗ ಮಾತ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಎತ್ತರಕ್ಕೇರಲು ಸಾಧ್ಯ ಎಂದು ಹೇಳಿದರು.

ಡಾಲ್ಫಿನ್ ವಿದ್ಯಾಸಂಸ್ಥೆಯ ಅಧ್ಯಕ್ಷ ಎ.ನಾಗರಾಜ್, ಆಡಳಿತಾಧಿಕಾರಿ ಚಂದನಾ ಅಶೋಕ್, ಪ್ರಾಂಶುಪಾಲರಾದ ನೂರ್ ಜಹಾನ್ ಬೇಗಮ್, ಡಾ.ಸುದರ್ಶನ್, ಮುನಿಶಾಮಪ್ಪ, ಆರಿಫ್ ಅಹಮದ್ ಮತ್ತು ಶಿಕ್ಷಕರು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version