Sidlaghatta : ಶಿಡ್ಲಘಟ್ಟ ನಗರದಲ್ಲಿ ಪಲ್ಸ್ ಪೋಲಿಯೋ ಜಾಥಾ ಕಾರ್ಯಕ್ರಮವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಮನೋಹರ್ ಮತ್ತು ಶ್ರೀಸರಸ್ವತಿ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ಎನ್.ಶ್ರೀಕಾಂತ್ ಅವರು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಲಾ ವಿದ್ಯಾರ್ಥಿಗಳು ಊರಿನ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ, ಪೊಲಿಯೋ ಲಸಿಕೆಯನ್ನು ಮಕ್ಕಳಿಗೆ ಹಾಕಿಸುವಂತೆ ಘೋಷಣೆಗಳನ್ನು ಕೂಗಿದರು.
ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಮನೋಹರ್ ಮಾತನಾಡಿ, ಮಾರ್ಚ್ 3 ರಿಂದ 6 ವರೆಗೆ ತಾಲ್ಲೂಕಿನಾದ್ಯಂತ 106 ಬೂತ್ ಗಳಲ್ಲಿ ಪಲ್ಸ್ ಪೊಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಗ್ರಾಮೀಣ ಭಾಗದಲ್ಲಿ 80 ಬೂತ್ ಗಳಲ್ಲಿ ಹಾಗೂ ನಗರದಲ್ಲಿ 26 ಬೂತ್ ಗಳಲ್ಲಿ ಪೊಲಿಯೋ ಲಸಿಕೆ ಹಾಕಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರ ಆರೋಗ್ಯ ಕೇಂದ್ರದ ವೈದ್ಯ ಡಾ. ಭರತ್, ನಗರ ಆರೋಗ್ಯ ಕೇಂದ್ರದ ಸಿಬ್ಬಂದಿ, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಮತ್ತು ಶಾಲಾ ಮಕ್ಕಳು ಹಾಜರಿದ್ದರು.