
Sidlaghatta : KPCC ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ.ಅಮೃತಾ ಅವರಿಗೆ ಧಮ್ಕಿ ಹಾಕಿ, ನಿಂದಿಸಿರುವ ವಿಷಯವಾಗಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ರಾಜೀವ್ ಗೌಡ ಪರ ವಕೀಲರು ಚಿಂತಾಮಣಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಶನಿವಾರ ಅರ್ಜಿ ಸಲ್ಲಿಸಿದ್ದರು.
ಜಾಮೀನಿನ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜನವರಿ 22 ರ ಗುರುವಾರ ಕ್ಕೆ ಮುಂದೂಡಿದೆ.
“ರಾಜೀವ್ ಗೌಡ ತಲೆ ಮರೆಸಿಕೊಂಡಿದ್ದಾರೆ. ಕಾನೂನು ಪ್ರಕಾರವಾಗಿ ಕ್ರಮ ತಗೊಳ್ಳಿ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಅವರು ನಮ್ಮ ಪಕ್ಷದವರಾಗಿರಲಿ ಅಥವಾ ಯಾವುದೇ ಪಕ್ಷದವರಾಗಿರಲಿ ಎಂದು ಹೇಳಿದ್ದೇನೆ” ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾಧ್ಯಮದವರೊಂದಿಗೆ ತಿಳಿಸಿದ್ದಾರೆ.