Home News ಒಂದೂಕಾಲು ಕೋಟಿ ರೂ ವೆಚ್ಚದಲ್ಲಿ ರಂಗಧಾಮ ಕಾಲುವೆಯ ದುರಸ್ತಿ – ಶಾಸಕ ವಿ.ಮುನಿಯಪ್ಪ

ಒಂದೂಕಾಲು ಕೋಟಿ ರೂ ವೆಚ್ಚದಲ್ಲಿ ರಂಗಧಾಮ ಕಾಲುವೆಯ ದುರಸ್ತಿ – ಶಾಸಕ ವಿ.ಮುನಿಯಪ್ಪ

0

ಚಿಕ್ಕಬಳ್ಳಾಪುರ ತಾಲೂಕಿನ ಹೊಸಹುಡ್ಯದಿಂದ ಹಂಡಿಗನಾಳ ಮಾರ್ಗವಾಗಿ ನಿರ್ಮಿಸಿರುವ ರಂಗಧಾಮ ಕಾಲುವೆಯನ್ನು ಸೋಮವಾರ ಉಪ ವಿಭಾಗಾಧಿಕಾರಿ ರಘುನಂದನ್, ಸಣ್ಣ ನೀರಾವರಿ ಇಲಾಖೆಯ (ಎಚ್.ಎನ್. ವ್ಯಾಲಿ) ಎಂಜಿನಿಯರ್ ಪ್ರದೀಪ್ ಮತ್ತು ತಹಶೀಲ್ದಾರ್ ಕೆ.ಅರುಂಧತಿ ಅವರೊಂದಿಗೆ ಪರಿಶೀಲಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.

 ಮುವ್ವತ್ತು ವರ್ಷಗಳ ಹಿಂದೆ ಕೆಲವು ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆದ ರಂಗಧಾಮ ಕಾಲುವೆಯ ಗರಿಯು ಒತ್ತುವರಿಯಾಗಿರುವುದನ್ನು ತೆರವುಗೊಳಿಸಿ ಕಾಲುವೆಯ ದುರಸ್ತಿ ಕಾಮಗಾರಿ ನಡೆಸಲು ಈಗ ಒಂದೂಕಾಲು ಕೋಟಿ ರೂ ವೆಚ್ಚವಾಗುತ್ತಿದೆ ಎಂದು ಅವರು ತಿಳಿಸಿದರು.

 ಸುಮಾರು 30 ವರ್ಷಗಳ ಹಿಂದೆ ನಿರ್ಮಿಸಿರುವ ರಂಗಧಾಮ ಕಾಲುವೆಯನ್ನು ಅಭಿವೃದ್ಧಿಗೊಳಿಸಲು ಇದೀಗ ಕಾಲ ಕೂಡಿ ಬಂದಿದೆ. ಈಗಾಗಲೇ ರಂಗಧಾಮ ಕಾಲುವೆಯಲ್ಲಿ ತುಂಬಿದ್ದ ಗಿಡ ಗಂಟೆಗಳನ್ನು ತೆರವುಗೊಳಿಸುವ ಕಾರ್ಯಚರಣೆ ನಡೆಯುತ್ತಿದೆ. ಸತತ ಬರಗಾಲದಿಂದ ತತ್ತರಿಸುತ್ತಿರುವ ಶಿಡ್ಲಘಟ್ಟ ತಾಲೂಕಿಗೆ ಎತ್ತಿನ ಹೋಳೆ ಮತ್ತು ಎಚ್ ಎನ್ ವ್ಯಾಲಿ ಯೋಜನೆಗಳ ಮೂಲಕ ಕೆರೆಗಳಿಗೆ ನೀರು ಹರಿಸಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದರು.

 ಶಾಸಕರು ಮತ್ತು ಅಧಿಕಾರಿಗಳ ಭೇಟಿಯ ವೇಳೆಯಲ್ಲಿ ನೆರೆದಿದ್ದ ಗ್ರಾಮಸ್ಥರು, ರಂಗಧಾಮ ಕಾಲುವೆಯನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಅದನ್ನು ತೆರವುಗೊಳಿಸಿ ಜೊತೆಗೆ ಕಾಲುವೆಯಲ್ಲಿ ತುಂಬಿರುವ ಹೂಳನ್ನು ತೆಗೆದು ನೀರು ಹರಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.

 ಕ್ಷೇತ್ರದ ಅಭಿವೃದ್ದಿಗಾಗಿ ಈ ಹಿಂದೆ ಬಿಡುಗಡೆಯಾಗಿದ್ದ 23  ಕೋಟಿ ರೂ.ಗಳ ಅನುದಾನವನ್ನು ಸರ್ಕಾರ ತಡೆ ಹಿಡಿದಿರುವುದರಿಂದ ಅಭಿವೃದ್ದಿ ಕೆಲಸಗಳಿಗೆ ಹಿನ್ನಡೆಯಾಗಿದೆ. ಈ ವಿಚಾರವನ್ನು ಮುಂದಿಟ್ಟು ಸರ್ಕಾರಕ್ಕೆ ಈಗಾಗಲೇ ಪತ್ರ ವ್ಯವಹಾರ ನಡೆಸಿದರೂ ಸೂಕ್ತ ರೀತಿಯ ಸ್ಪಂದನೆ ಸಿಗಲಿಲ್ಲ. ಹೀಗಾಗಿ ಮುಂದಿನ ಅಧಿವೇಶನದಲ್ಲಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ದ ದನಿ ಎತ್ತುವುದಾಗಿ ನುಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಸುಬ್ರಮಣಿ, ಗ್ರಾಮ ಪಂಚಾಯಿತಿ ಸದಸ್ಯ ಜಯರಾಂ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಮುನಿ ನಂಜಪ್ಪ, ವೇಣು ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi