ವಸತಿ ಶಾಲೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವ: ಹೂಗಳಲ್ಲಿ ಕರ್ನಾಟಕ ನಕಾಶೆ ವಿಶೇಷ ಆಕರ್ಷಣೆ

Students and teachers lighting the lamp at the 71st Kannada Rajyotsava, Indira Gandhi Residential School

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೆಗೌಡನಹಳ್ಳಿ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳು ಶಾಲೆಯ ಆವರಣದಲ್ಲಿ ತಳಿರು ತೋರಣಗಳನ್ನು ಕಟ್ಟಿ, ಭುವನೇಶ್ವರಿ ತಾಯಿಯ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿದರು. ಕರ್ನಾಟಕದ ನಕಾಶೆಯನ್ನು ಹೂಗಳಿಂದ ಅಲಂಕರಿಸಿದ್ದು ವಿಶೇಷ ಆಕರ್ಷಣೆಯಾಗಿತ್ತು.

ಶಾಲೆಯ ಪ್ರಾಂಶುಪಾಲೆ ವಿಜಯಶ್ರೀ ಮಾತನಾಡಿ, ಕರ್ನಾಟಕದ ನಕಾಶೆಯನ್ನು ಹೂಗಳಿಂದ ಸುಂದರವಾಗಿ ಅಲಂಕರಿಸಿದ ವಿದ್ಯಾರ್ಥಿಗಳ ತಂಡದ ಕಾರ್ಯವನ್ನು ಶ್ಲಾಘಿಸಿ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಶಾಲೆಯ ಆವರಣದಲ್ಲಿ ಹಬ್ಬದ ವಾತಾವರಣ ಮನೆಮಾಡಿತ್ತು.

ಸಂಬಂಧಿತ ಸುದ್ದಿ: ಶಿಡ್ಲಘಟ್ಟ ನಗರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

More

Share
error: Content is protected !!
Exit mobile version