Home News ವಸತಿ ಶಾಲೆಗೆ ಅರ್ಜಿ ಆಹ್ವಾನ

ವಸತಿ ಶಾಲೆಗೆ ಅರ್ಜಿ ಆಹ್ವಾನ

0
Sidlaghatta Government Residential School Application

Sidlaghatta : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್, ಇಂದಿರಾಗಾಂಧಿ ವಸತಿ ಶಾಲೆಗೆ 2023-24 ನೇ ಸಾಲಿನ 6 ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಜನವರಿ 5 ರಿಂದ ಆರಂಭವಾಗಿದ್ದು, ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು, ತಮ್ಮ ಸಮೀಪದ ವಸತಿ ಶಾಲೆಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಜನವರಿ 22 ಆಗಿದೆ.

ಅರ್ಜಿಯೊಂದಿಗೆ ಸಲ್ಲಿಸಬೇಕಾಗಿರುವ ದಾಖಲಾತಿಗಳು:

ವಿದ್ಯಾರ್ಥಿಯ ಆಧಾರ್ ಕಾರ್ಡ್, SATS ನಂಬರ್, ಶಾಲಾ ದೃಢೀಕರಣ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿಯ ಇತ್ತೀಚಿನ ಪೋಟೋ ಸಲ್ಲಿಸಬೇಕು. ಪರೀಕ್ಷೆ ಮಾರ್ಚ್ 12 ರಂದು ನಡೆಯಲಿದೆ ಎಂದು ಅಪ್ಪೇಗೌಡನಹಳ್ಳಿ ಇಂದಿರಾಗಾಂಧಿ ವಸತಿ ಶಾಲೆಯ ಪ್ರಾಂಶುಪಾಲೆ ವಿಜಯಶ್ರೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version