Sidlaghatta : ಶಿಡ್ಲಘಟ್ಟ ನಗರದ ನೆಹರೂ ಕ್ರೀಡಾಂಗಣದಲ್ಲಿ 2022-23 ನೇ ಸಾಲಿನ ಎರಡು ದಿನಗಳ ಗ್ರಾಮೀಣ ಕ್ರೀಡಾಕೂಟಕ್ಕೆ ಸೋಮವಾರ ಮಧ್ಯಾಹ್ನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜ ಚಾಲನೆ ನೀಡಿದರು.
2022-23ನೇ ಸಾಲಿನ ಗ್ರಾಮೀಣ ಕ್ರೀಡಾಕೂಟ ಸಂಬಂಧ ವಿವಿಧ ಗ್ರಾಮೀಣ ಕ್ರೀಡೆಗಳಾದ ಕಬಡ್ಡಿ, ಖೋ-ಖೋ, ಕುಸ್ತಿ ಮತ್ತು ಯೋಗ ಮುಂತಾದವುಗಳನ್ನು ಜನವರಿ 30 ಮತ್ತು 31 ಎರಡು ದಿನಗಳು ನೆಹರು ಕ್ರೀಡಾಂಗಣದಲ್ಲಿ ನಡೆಸಲಾಗುತ್ತಿದೆ.
ಕಬಡ್ಡಿ ಪಂದ್ಯಾವಳಿಯಲ್ಲಿ ತಾಲ್ಲೂಕಿನ 28 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ರೀಡಾಪಟುಗಳು ಭಾಗಿಯಾಗಿದ್ದರು. ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ತುಮ್ಮನಹಳ್ಳಿ ಗ್ರಾಮ ಪಂಚಾಯಿತಿಯು ಪ್ರಥಮ ಸ್ಥಾನ ಪಡೆದಿದ್ದು, ಹೊಸಪೇಟೆ ಗ್ರಾಮ ಪಂಚಾಯಿತಿಯು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕರ ಕಬಡ್ಡಿ ಪಂದ್ಯಾವಳಿಯಲ್ಲಿ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿ ಹಾಗೂ ದೇವರ ಮಳ್ಳೂರು ಗ್ರಾಮ ಪಂಚಾಯಿತಿಯ ಕ್ರೀಡಾಪಟುಗಳು ಫೈನಲ್ ಹಂತ ತಲುಪಿದ್ದವು. ಫೈನಲ್ ಪಂದ್ಯದಲ್ಲಿ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿಯು ಪ್ರಥಮ ಸ್ಥಾನ, ದೇವರಮಳ್ಳೂರು ಗ್ರಾಮ ಪಂಚಾಯಿತಿ ದ್ವಿತೀಯ ಸ್ಥಾನ ಪಡೆದುಕೊಂಡಿತು.
ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ತಾಲ್ಲೂಕಿನ ಎಲ್ಲಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.