ಸವಿತಾ ಮಹರ್ಷಿ ಜಯಂತ್ಯುತ್ಸವ ಹಾಗೂ ಛತ್ರಪತಿ ಶಿವಾಜಿ ಜಯಂತ್ಯುತ್ಸವ

Savita Maharshi Sidlaghatta Taluk Office

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಸವಿತಾ ಮಹರ್ಷಿ ಜಯಂತ್ಯುತ್ಸವ ಹಾಗೂ ಛತ್ರಪತಿ ಶಿವಾಜಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶಿರಸ್ತೆದಾರ್ ಮಂಜುನಾಥ್ ಮಾತನಾಡಿದರು.

ಪುರಾಣ ಗ್ರಂಥಗಳ ಪ್ರಕಾರ ಸವಿತಾ ಮಹರ್ಷಿ ದೇವ ದೇವತೆಗಳ ಆಯುಷ್ಕರ್ಮ ಸೇವೆಯನ್ನು ಮಾಡುತ್ತಿದ್ದಾರೆಂದು ತಿಳಿದುಬರುತ್ತದೆ. ಶಿವನ ದಿವ್ಯ ದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿ ಬ್ರಹ್ಮಜ್ಞಾನ ಹೊಂದಿರುವುದರಿಂದಲೇ ಚತುರ್ವೇದಗಳಲ್ಲಿ ಒಂದಾದ ಸಾಮವೇದವನ್ನು ಬರೆದ್ದಾರೆ ಎಂದು ಅವರು ತಿಳಿಸಿದರು.

 ಪ್ರತಿಯೊಂದು ಸಮುದಾಯವನ್ನು ಗೌರವಿಸಿ ಅದರ್ಶ ವ್ಯಕ್ತಿಗಳ ತತ್ವಗಳನ್ನು ಮುಂದಿನ ಪೀಳಿಗೆಗೆ ಗೊತ್ತುಪಡಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಜಯಂತಿಗಳನ್ನು ಆಚರಿಸುವ ಸತ್ಕಾರ್ಯಗಳನ್ನು ನಡೆಸಿದೆ. ಮಹಾನ್‌ ವ್ಯಕ್ತಿಗಳ ತತ್ವ-ಸಂದೇಶಗಳು ಸರ್ವಕಾಲಿಕವಾಗಿದ್ದು ಅದರ ಹಲವು ಭಾಗವನ್ನಾದರೂ ಜನರು ಜೀವನದಲ್ಲಿ ಅಳವಡಿಸಿಕೊಂಡಾಗ, ಉತ್ತಮ ಸಮಾಜ ನಿರ್ಮಾಣದೊಂದಿಗೆ ಸದೃಢ ಭಾರತ ಹೊರಹೊಮ್ಮಲು ಸಾಧ್ಯವಿದೆ ಎಂದರು.

  ಅಧಿಕಾರಿ ವಸಂತ್ ಮಾತನಾಡಿ, ಭಾರತ ದೇಶ ಕಂಡ ವೀರಾಧಿವೀರರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಕೂಡ ಒಬ್ಬರು.  ಭಾರತದಲ್ಲಿ ಅತ್ಯಂತ ಧೈರ್ಯಶಾಲಿ ಪುರುಷರು ಮಾತ್ರವಲ್ಲ, ಕೆಲವೊಂದು ಮಹಿಳೆಯರು ಕೂಡ ಆಡಳಿತ ನಡೆಸಿದ ಇತಿಹಾಸವಿದೆ. ಈ ಧೈರ್ಯಶಾಲಿ ಸಾಮ್ರಾಜ್ಯದ ಅಧಿಪತಿಗಳು ತಮ್ಮ ತಾಯಿನಾಡು ಮತ್ತು ಸ್ವರಾಜ್ಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ತ್ಯಜಿಸಿದ್ದಾರೆ. ಅಂತಹ ಮಹಾನ್‌ ಧೈರ್ಯಶಾಲಿ ಯೋಧರಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಕೂಡ ಒಬ್ಬರು ಎಂದು ಹೇಳಿದರು.

 ಸವಿತಾ ಸಮಾಜದ ನಾರಾಯಣಸ್ವಾಮಿ, ಬಾಲರಾಜು, ಪ್ರಗತಿಪರ ರೈತ ಎಚ್.ಜಿ.ಗೋಪಾಲಗೌಡ, ಕೃಷ್ಣಪ್ಪ ಹಾಜರಿದ್ದರು.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
https://www.sidlaghatta.com

📱 Join WhatsApp
https://wa.me/917406303366?text=Hi

Leave a Reply

Your email address will not be published. Required fields are marked *

error: Content is protected !!