ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ವಿಶೇಷ ದಾಖಲಾತಿ ಆಂದೋಲನ

- Advertisement -
- Advertisement -

ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಸಾರ್ವಜನಿಕ ಶಿಕ್ಷಣ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶೇಷ ದಾಖಲಾತಿ ಆಂದೋಲನದ ಅಂಗವಾಗಿ ಗ್ರಾಮದಲ್ಲಿ ಜಾಥಾ ಮೂಲಕ ಕರಪತ್ರಗಳನ್ನು ಹಂಚಿ ಜೆ.ವೆಂಕಟಾಪುರ ಗ್ರಾಮಪಂಚಾಯಿತಿ ಮಾಜಿ ಸದಸ್ಯ ಎನ್.ಅಶ್ವತ್ಥಪ್ಪ ಮಾತನಾಡಿದರು.

ಎಲ್ಲರಿಗೂ ಉಚಿತ ಮತ್ತು ಕಡ್ಡಾಯಶಿಕ್ಷಣ ನೀಡಬೇಕಾದ ಅವಶ್ಯಕತೆಯಿದೆ. ಅಂತಹ ಆಶಯದ ಈಡೇರಿಕೆಗೆ ಸರ್ಕಾರವು ಶಿಕ್ಷಣಕ್ಕಾಗಿ ಹಲವು ಸವಲತ್ತುಗಳನ್ನು ನೀಡುತ್ತಿದೆ. ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗದೇ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಪಡೆಯಲು ಸಾಧ್ಯವಿದೆ ಎಂದು  ಅವರು ತಿಳಿಸಿದರು.

ಕಲಿಯುವ ಮಕ್ಕಳಲ್ಲಿ ಆತ್ಮಸ್ಥೈರ್ಯವನ್ನು ತುಂಬಿಸುವಂತಹ ಭೌತಿಕ ಮತ್ತು ಭೌದ್ಧಿಕ ವಾತಾವರಣವನ್ನು ಸೃಷ್ಟಿಸಲು ಸರ್ಕಾರಿ ಶಾಲೆಗಳಲ್ಲಿ ಕ್ರಮಕೈಗೊಳ್ಳಲಾಗಿದೆ. ಸ್ಪರ್ಧಾತ್ಮಕವಾದ ಸಮಾಜದಲ್ಲಿ ಎದುರಾಗುವಂತಹ ಎಲ್ಲಾ ಸಮಸ್ಯೆಗಳನ್ನು ನಿಭಾಯಿಸಿಕೊಂಡು ಬದುಕಬಲ್ಲ ಉತ್ತಮವಾದ ಶಿಕ್ಷಣವನ್ನು ಪಡೆಯುವಂತೆ ಮಕ್ಕಳನ್ನು ಪ್ರೋತ್ಸಾಹಿಸಬೇಕಿದೆ ಎಂದರು.

ಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ಮಾತನಾಡಿ, ಸಂಘಸಂಸ್ಥೆಗಳು, ದಾನಿಗಳಿಂದ ಮಕ್ಕಳಿಗೆ ಮತ್ತು ಶಾಲಾ ಮೂಲಸೌಕರ್ಯಗಳಿಗೆ ಅಗತ್ಯವಾದ ವಸ್ತುಗಳನ್ನು ಸಂಗ್ರಹಿಸಿ ಗುಣಾತ್ಮಕಶಿಕ್ಷಣಕ್ಕೆ ಒತ್ತುನೀಡಲಾಗಿದೆ. ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಇಲ್ಲಿನ ಶಾಲೆಯ ಮಕ್ಕಳು ಪ್ರತಿಭೆ ಪ್ರದರ್ಶಿಸಿರುವುದು ಗಮನಾರ್ಹವಾದುದು ಎಂದರು.

 ಗ್ರಾಮದಲ್ಲಿ ತಂಡದಲ್ಲಿ ಸಂಚರಿಸಿ ಕರಪತ್ರಗಳನ್ನು ಹಂಚಿ ಜಾಗೃತಿ ಮೂಡಿಸಿ ಅರ್ಹಮಕ್ಕಳನ್ನು ದಾಖಲು ಮಾಡಿಕೊಳ್ಳಲಾಯಿತು.

 ಗ್ರಾಮಪಂಚಾಯಿತಿ ಮಾಜಿ ಸದಸ್ಯ ನರಸಿಂಹಪ್ಪ, ಸದಸ್ಯೆ ಭಾಗ್ಯಮ್ಮ ಅರುಣ್‌ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷ ಎಂ.ಶಂಕರಪ್ಪ, ಸದಸ್ಯೆ ಕೆ.ವಿನುತಾ, ಮಾಜಿ ಸದಸ್ಯ ಬಚ್ಚೇಗೌಡ, ದೊಡ್ಡಮುನಿವೆಂಕಟಶೆಟ್ಟಿ, ಮುಖ್ಯಶಿಕ್ಷಕಿ ಉಮಾದೇವಿ, ಶಿಕ್ಷಕ ಎ.ಬಿ.ನಾಗರಾಜು, ಬಿ.ನಾಗರಾಜು, ಎಂ.ವೈ.ಲಕ್ಷ್ಮಯ್ಯ, ಶಿಕ್ಷಕಿ ತಾಜೂನ್, ಭಾಗ್ಯಮ್ಮ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!