ಶಾಲಾ ಹಂತದಲ್ಲೇ ನಾಯಕತ್ವ ಪಾಠ: ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪದಗ್ರಹಣ ಸಮಾರಂಭ

- Advertisement -
- Advertisement -

Sidlaghatta ಶಿಡ್ಲಘಟ್ಟ: ನಗರದ ಡಾಲ್ಫಿನ್ ಪಬ್ಲಿಕ್ ಶಾಲೆಯ (Dolphin Public School) ಸಿಬಿಎಸ್‌ಇ (CBSE) ವಿಭಾಗದಲ್ಲಿ ಶುಕ್ರವಾರ “ವಿದ್ಯಾರ್ಥಿ ನಾಯಕತ್ವ ಪದಗ್ರಹಣ ಸಮಾರಂಭ” ಅನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಶಾಲಾ ಸಂಸತ್ತನ್ನು ರಚಿಸಲಾಗಿದ್ದು, ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಪದಗ್ರಹಣ ಬಾಧ್ಯತೆ ಬೋಧಿಸಿ ಪದಗ್ರಹಣ ಸಮಾರಂಭ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾಲ್ಫಿನ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್.ಅಶೋಕ್, ಶಾಲಾ ಸಂಸತ್ತಿನಲ್ಲಿ ಆಯ್ಕೆಯಾದ ವಿದ್ಯಾರ್ಥಿ ನಾಯಕರುಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳುವುದರಿಂದ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಡಾಲ್ಫಿನ್ ವಿದ್ಯಾಸಂಸ್ಥೆಯ ವ್ಯವಸ್ಥಾಪಕಿ ಚಂದನಾ ಅಶೋಕ್ ಮಾತನಾಡಿ, ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ನಾಯಕತ್ವದ ಅವಕಾಶ ಒದಗಿಸುವುದರಿಂದ ಅವರಲ್ಲಿ ಜವಾಬ್ದಾರಿಯುತ ನಡವಳಿಕೆ ಮತ್ತು ತಂಡ ಮನೋಭಾವ ಬೆಳೆಯುತ್ತದೆ ಎಂದು ತಿಳಿಸಿದರು.

ಪ್ರಾಂಶುಪಾಲ ಎಲ್.ಮುನಿಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವಂತದ್ದು, ನಾಯಕತ್ವ ಗುಣಗಳನ್ನು ಹೆಚ್ಚಿಸುವುದು, ಸ್ವಾಭಿಮಾನ ಹಾಗೂ ಆಂತರಿಕ ಪ್ರತಿಭೆಯನ್ನು ಹೊರತರಲು ಇಂತಹ ಕಾರ್ಯಕ್ರಮಗಳು ಸಹಾಯಕವಾಗುತ್ತವೆ ಎಂದರು. ಪ್ರಸ್ತುತ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಲು ಕೇವಲ ಪಾಠ ಪ್ರವಚನಗಳಷ್ಟೇ ಸಾಲದು, ಪಠ್ಯೇತರ ಚಟುವಟಿಕೆಗಳೂ ಅತ್ಯಗತ್ಯ ಎಂದು ಅವರು ಪ್ರತಿಪಾದಿಸಿದರು.

ಶಾಲೆಯ ಮುಖ್ಯ ವಿದ್ಯಾರ್ಥಿ ವಿಭಾಗ, ಸಾಂಸ್ಕೃತಿಕ ವಿಭಾಗ, ಕ್ರೀಡಾ ವಿಭಾಗ, ಆರೋಗ್ಯ ವಿಭಾಗ, ಶಿಸ್ತಿನ ವಿಭಾಗ, ಸಾಹಿತ್ಯ ವಿಭಾಗ, ಇಕೋ ಕ್ಲಬ್ (Eco Club) ಸೇರಿದಂತೆ ಒಟ್ಟು 25 ವಿಭಾಗಗಳಿಗೆ ಒಬ್ಬ ವಿದ್ಯಾರ್ಥಿ ಹಾಗೂ ಒಬ್ಬ ವಿದ್ಯಾರ್ಥಿನಿಯನ್ನು ಆಯ್ಕೆ ಮಾಡಲಾಗಿದ್ದು, ಆಯ್ಕೆಯಾದ ಎಲ್ಲ ವಿದ್ಯಾರ್ಥಿ ಪ್ರತಿನಿಧಿಗಳು ಪದಗ್ರಹಣ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಡಾಲ್ಫಿನ್ ವಿದ್ಯಾಸಂಸ್ಥೆಯ ಅಧ್ಯಕ್ಷ ಎ.ನಾಗರಾಜ್, ಕಾರ್ಯದರ್ಶಿ ವಿ.ಕೃಷ್ಣಪ್ಪ, ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್‌ಐ (ASI) ನರಸಿಂಹಯ್ಯ, ಚಿಕ್ಕಬಳ್ಳಾಪುರದ ಎನ್‌ಸಿಸಿ (NCC) ಅಧಿಕಾರಿ ಸುಬೇದಾರ್ ಮಲ್ಲಿಕಾರ್ಜುನ್, ಡಾಲ್ಫಿನ್ ಪಿಯು ಕಾಲೇಜ್ ಪ್ರಾಂಶುಪಾಲ ಎನ್.ಶ್ರೀನಿವಾಸಮೂರ್ತಿ, ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

In English:

Dolphin Public School’s CBSE section held a Student Leadership Investiture Ceremony, forming a school parliament and administering the oath of office to newly elected student representatives. Across 25 departments — including student affairs, culture, sports, health, discipline, literary, and the Eco Club — one boy and one girl were chosen as representatives from each. Speakers, including managing director N. Ashok, manager Chandana Ashok, and principal L. Munikrishnappa, urged the students to lead responsibly and stressed that leadership and discipline built at school level help shape better citizens.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!