News

ಸ್ವಸಹಾಯ ಸಂಘಗಳ ಉತ್ಪನ್ನಗಳ ಕಿಟ್ ಹಾಸ್ಟೆಲ್‌ಗಳಿಗೆ ಪೂರೈಕೆ: ಶಾಸಕರಿಂದ ಚಾಲನೆ

MLA B.N. Ravikumar receiving self help group product kits for hostels, Sidlaghatta

Sidlaghatta : ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸುವ ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ಹಾಗೂ ಅವರ ಆರ್ಥಿಕ ಸ್ವಾವಲಂಬನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ, ತಾಲ್ಲೂಕಿನ ಹಾಸ್ಟೆಲ್‌ಗಳಿಗೆ ಈ ಉತ್ಪನ್ನಗಳ ಕಿಟ್‌ಗಳನ್ನು ಸರಬರಾಜು ಮಾಡುವ ಕಾರ್ಯಕ್ರಮಕ್ಕೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್. ರವಿಕುಮಾರ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳೆಯರು ಸಿದ್ಧಪಡಿಸಿದ ವಿವಿಧ ಉತ್ಪನ್ನಗಳ ಕಿಟ್‌ಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಶಾಸಕರು ಹಾಸ್ಟೆಲ್‌ಗಳಿಗೆ ಅಗತ್ಯವಿರುವ ದಿನಬಳಕೆಯ ವಸ್ತುಗಳ ಖರೀದಿಯಲ್ಲಿ ಸ್ವಸಹಾಯ ಸಂಘಗಳ ಮಹಿಳೆಯರ ಉತ್ಪನ್ನಗಳಿಗೆ ಆದ್ಯತೆ ನೀಡುವುದರಿಂದ, ಸ್ಥಳೀಯ ಉತ್ಪಾದನೆಗೆ ಬಲ ಸಿಗಲಿದೆ. ಜತೆಗೆ, ಮಹಿಳೆಯರು ತಮ್ಮ ಆರ್ಥಿಕ ಚಟುವಟಿಕೆಗಳನ್ನು ವಿಸ್ತರಿಸಿ ಆದಾಯ ಹೆಚ್ಚಿಸಿಕೊಳ್ಳಲು ಮತ್ತು ತಮ್ಮ ಉತ್ಪನ್ನಗಳಿಗೆ ವಿಶಾಲ ಮಾರುಕಟ್ಟೆಯನ್ನು ಕಂಡುಕೊಳ್ಳಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸುವ ಉತ್ಪನ್ನಗಳನ್ನು ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ ಆರ್., ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ವಿಜಯ್ ಕುಮಾರ್, ಬ್ಲಾಕ್ ಮ್ಯಾನೇಜರ್ ನರಸಿಂಹ, ವಲಯ ಮೇಲ್ವಿಚಾರಕ ಬಾಲರಾಜು, ಸ್ವಸಹಾಯ ಸಂಘದ ಸದಸ್ಯೆ ರುಕ್ಮಿಣಿ, ಎಂ.ಬಿ.ಕೆ.ಗಳಾದ ಶಿಲ್ಪಾ, ಚೈತ್ರಾ, ನಾಗರತ್ನ ಹಾಗೂ ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕದ ಸಿಬ್ಬಂದಿ ಉಪಸ್ಥಿತರಿದ್ದರು.

ಸಂಬಂಧಿತ ಸುದ್ದಿ: ಸ್ವಸಹಾಯ ಸಂಘಗಳ ಮಹಿಳೆಯರ ಉತ್ಪನ್ನಗಳಿಗೆ ಮಾರುಕಟ್ಟೆ

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

More

Share
error: Content is protected !!