
Sidlaghatta : ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮೀಣ ಕೈಗಾರಿಕಾ ವಿಭಾಗದ ವತಿಯಿಂದ ಗುರುವಾರ ನಡೆದ ಕಾರ್ಯಕ್ರಮದಲ್ಲಿ 111 ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ಹಾಗೂ 64 ಮಂದಿ ಕುಶಲಕರ್ಮಿಗಳಿಗೆ ಉಪಕರಣಗಳ ಕಿಟ್‌ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಶಾಸಕ ಬಿ.ಎನ್. ರವಿಕುಮಾರ್ ಮಾತನಾಡಿ, ಸರ್ಕಾರದ ಜನಪರ ಯೋಜನೆಗಳನ್ನು ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ನೀಡದೆ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಯಾರಿಗೆ ಎಷ್ಟು ಸೌಲಭ್ಯ ವಿತರಣೆ?
ಕಾರ್ಮಿಕ ಇಲಾಖೆಯಿಂದ 95 ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 16 ಸೇರಿ ಒಟ್ಟು 111 ಮಹಿಳೆಯರಿಗೆ ಸ್ವಯಂ ಉದ್ಯೋಗಕ್ಕಾಗಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಬಡಗಿ, ಗಾರೆ, ದೋಭಿ, ಕ್ಷೌರಿಕ, ಕಮ್ಮಾರಿಕೆ ಹಾಗೂ ಕಲ್ಲು ಕೆಲಸ ಸೇರಿದಂತೆ ವಿವಿಧ ವೃತ್ತಿಗಳಲ್ಲಿ ತೊಡಗಿರುವ 64 ಮಂದಿ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ ಕಿಟ್‌ಗಳನ್ನು ನೀಡಲಾಯಿತು.
2026-27ನೇ ಸಾಲಿನ ಯೋಜನೆಗಳಿಗೆ ಅರ್ಹರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರದ ಕೈಗಾರಿಕಾ ವಿಸ್ತರಣಾ ಅಧಿಕಾರಿ ಗೀತಾ ಅವರನ್ನು ಸಂಪರ್ಕಿಸಬಹುದು ಎಂದು ಶಾಸಕರು ತಿಳಿಸಿದರು.
ಕಾರ್ಮಿಕ ಇಲಾಖೆ ಜಿಲ್ಲಾ ಉಪನಿರ್ದೇಶಕ ಟಿ. ಮುಕುಂದ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೇಮಾವತಿ, ಕೈಗಾರಿಕಾ ವಿಸ್ತರಣಾ ಅಧಿಕಾರಿ ಗೀತಾ, ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ ಮತ್ತು ಹುಜಗೂರು ರಾಮಣ್ಣ, ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್. ಸುಬ್ಬಾರೆಡ್ಡಿ, ಮುಖಂಡರಾದ ತಾದೂರು ರಘು, ಮೇಲೂರು ಮಂಜುನಾಥ್, ನಗರಸಭೆ ಮಾಜಿ ಅಧ್ಯಕ್ಷ ವೆಂಕಟಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರ್, ಕೊತ್ತನೂರು ಲಕ್ಷ್ಮಿಪತಿ, ವಿಜೇಂದ್ರ, ಕುಂದಲಗುರ್ಕಿ ಚಂದ್ರಶೇಖರ್, ಪ್ರದೀಪ್ ದೀಪು, ಗಜೇಂದ್ರ ಹಾಗೂ ಫಲಾನುಭವಿಗಳು ಹಾಜರಿದ್ದರು. ಈ ಹಿಂದೆಯೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮದಡಿ ಹೊಲಿಗೆ ಯಂತ್ರಗಳನ್ನು ವಿತರಿಸಲಾಗಿತ್ತು.
In English: Sidlaghatta Taluk Panchayat and the Rural Industries Department distributed electric sewing machines to 111 women and improved tool kits to 64 artisans on Thursday. MLA B.N. Ravikumar inaugurated the event and urged eligible beneficiaries to apply online for 2026-27 schemes.