ನಗರದ ಶ್ರೀ ನಗರೇಶ್ವರ ದೇವಾಲಯದ ಮುಂಭಾಗದಲ್ಲಿ ಅಯೋಧ್ಯಾನಗರ ಶಿವಾಚಾರ್ಯ ವೈಶ್ಯ ನಗರ್ತ ಮಂಡಳಿ ವತಿಯಿಂದ ಗುರುವಾರ ಶಿವಕುಮಾರ ಸ್ವಾಮೀಜಿ ಅವರ ಎರಡನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ದಾಸೋಹ ಹಾಗೂ ಅಯೋಧ್ಯಾ ಶ್ರೀ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಅಯೋಧ್ಯಾನಗರ ಶಿವಾಚಾರ್ಯ ವೈಶ್ಯ ನಗರ್ತ ಮಂಡಳಿ ಉಪಾಧ್ಯಕ್ಷ ಎಸ್.ನಾಗರಾಜ್ ಮಾತನಾಡಿದರು.
ಶ್ರೀ ಸಿದ್ಧಗಂಗಾ ಕ್ಷೇತ್ರದಲ್ಲಿ ಊಟ, ವಿದ್ಯೆ ಮತ್ತು ವಸತಿಯ ಉಚಿತ ವ್ಯವಸ್ಥೆಯಲ್ಲಿದೆ. ಇದೇ ಕಾರಣದಿಂದ ತ್ರಿವಿಧ ದಾಸೋಹದ ಕ್ಷೇತ್ರವೆಂದೇ ಅದು ಪ್ರಸಿದ್ಧಿ ಪಡೆದಿದೆ. ಲಕ್ಷಾಂತರ ಮಕ್ಕಳಿಗೆ ತ್ರಿವಿಧ ದಾಸೋಹ ಕಾರ್ಯ ನಡೆಯುತ್ತಿದೆ. ಇದಕ್ಕೆ ಮೂಲರಾದ ಶಿವಕುಮಾರ ಸ್ವಾಮೀಜಿಯವರ ಪುಣ್ಯಸ್ಮರಣೆ ಮಾಡುವುದರಿಂದ ನಮ್ಮ ಬದುಕು ಹಸನಾಗುತ್ತದೆ ಎಂದು ಅವರು ತಿಳಿಸಿದರು.
ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಎಲ್ಲರೂ ತಮ್ಮ ಕೈಲಾದಷ್ಟು ನಿಧಿ ಸಮರ್ಪಿಸಬೇಕೆಂದು ವಿನಂತಿಸಿದರು.
ಅಯೋಧ್ಯಾನಗರ ಶಿವಾಚಾರ್ಯ ವೈಶ್ಯ ನಗರ್ತ ಮಂಡಳಿ ಅಧ್ಯಕ್ಷ ಕೆ. ಶಿವಶಂಕರ್, ವಿನಾಯಕ, ಕೆ.ಸಿ.ಸುರೇಶ್ ಬಾಬು, ಮಲ್ಲಿಕಾರ್ಜುನ್, ದೇವರಾಜ್, ಮಂಜುನಾಥ್, ಮುಕೇಶ್, ನವೀನ್, ಮುರಳಿ ಹಾಜರಿದ್ದರು.