ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ: ಜಿಲ್ಲಾ ಮಟ್ಟಕ್ಕೆ ವಿದ್ಯಾರ್ಥಿಗಳ ಆಯ್ಕೆ

- Advertisement -
- Advertisement -

Sidlaghatta : ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲೆ ವಿಜಯಶ್ರೀ, “ಕ್ರೀಡೆಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯ ಚಟುವಟಿಕೆಗಳಷ್ಟೇ ಮಹತ್ವ ಪಡೆದಿವೆ. ಏಕಾಗ್ರತೆಯಿಂದ ನಿರಂತರ ಅಭ್ಯಾಸ ಮಾಡಿದರೆ ಯಶಸ್ಸು ಸಾಧಿಸಲು ಸಾಧ್ಯ” ಎಂದರು.

“ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವುದರ ಜತೆಗೆ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಒತ್ತಡದ ಪರಿಸ್ಥಿತಿಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸಲು ಸಹಕಾರಿಯಾಗುತ್ತವೆ. ನಿರಂತರ ಅಭ್ಯಾಸದೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ. ಜೀವನದಲ್ಲಿ ಸೋಲು–ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಒಂದು ಸೋಲು ಮುಂದಿನ ಗೆಲುವಿಗೆ ದಾರಿ ಮಾಡಿಕೊಡಬಹುದು” ಎಂದು ಅವರು ಹೇಳಿದರು.

ಶಾಲೆಯ ಉಪಪ್ರಾಂಶುಪಾಲ ಮುರಳೀಧರ ಡಿ.ಪಿ., ಶಿಕ್ಷಕರಾದ ಪ್ರಸಾದ್ ಎಸ್.ಎ., ಸಹನಾ ಟಿ., ಶಶಿದೀಪಿಕಾ ಜಿ., ನರೇಶ್ ಜಿ.ಎನ್., ಸಹನ ಎ., ರಾಮಪ್ಪ ಸಿದ್ದಪ್ಪ ಶಿವರಾಯಿ, ತ್ರಿವೇಣಿ ಕೆ.ಪಿ., ಶ್ರೀಲಕ್ಷ್ಮೀ, ಯಲ್ಲಪ್ಪ ಗದ್ದಿನಕೇರಿ ಹಾಗೂ ಸಿದ್ಧು ಹುಣಸೀಕಟ್ಟಿ ಇದ್ದರು.

ಅಪ್‌ಡೇಟ್: ಇದೇ ಶಾಲೆಯ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಲ್ಲೂ ಗೆದ್ದಿದ್ದು, ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಜಯ: ವಸತಿ ಶಾಲೆ ವಿದ್ಯಾರ್ಥಿನಿಯರು ವಿಭಾಗ ಮಟ್ಟಕ್ಕೆ ಆಯ್ಕೆ ವರದಿ ಓದಿ.

In English: Students of Indira Gandhi Residential School, Appegowdanahalli, won first place in the taluk-level shuttle badminton competition and have qualified for the district-level round. Principal Vijayashree, congratulating the students, said sports are as important as academics for students’ all-round development, and that consistent, focused practice leads to success, teaching them to accept wins and losses equally as one loss can pave the way for the next win.

ಇದೇ ಶಾಲೆಯ ಪ್ರಾಂಶುಪಾಲರ ಇಂತಹುದೇ ಸಂದೇಶದ ಬಗ್ಗೆ ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಿ: ವಿಜಯಶ್ರೀ ಎಂಬ ವರದಿಯನ್ನೂ ಓದಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Silk

Related news

- Advertisement -