Home News ಜೆಡಿಎಸ್ ಸಂಘಟನಾ ಸಭೆಯಲ್ಲಿ ಕಾಂಗ್ರೆಸ್ ಗೊಂದಲಗಳೇ ಚರ್ಚೆಯ ವಿಷಯ

ಜೆಡಿಎಸ್ ಸಂಘಟನಾ ಸಭೆಯಲ್ಲಿ ಕಾಂಗ್ರೆಸ್ ಗೊಂದಲಗಳೇ ಚರ್ಚೆಯ ವಿಷಯ

0
Sidlagahtta Sadali JDS Meeting

Sadali, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ಗುರುವಾರ ನಡೆದ ಸಾದಲಿ ಮತ್ತು ಎಸ್.ದೇವಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಸಂಘಟನಾ ಸಭೆಯಲ್ಲಿ ಪಕ್ಷದ ನಾಯಕರಾದ ಜಿ.ಗಂಗಾಧರ್ (ಗಂಗ) ಮಾತನಾಡಿ, “ಜೆಡಿಎಸ್‌ನಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ, ಗೊಂದಲಗಳು ಮಾತ್ರ ಕಾಂಗ್ರೆಸ್‌ನಲ್ಲಿ ನಡೆಯುತ್ತಿವೆ. ಮನೆಯೊಂದು ಮೂರು ಬಾಗಿಲಾದಂತೆ ಮೂರು ಬಣಗಳಲ್ಲಿ ವಿಭಜನೆಯಾಗಿರುವ ಕಾಂಗ್ರೆಸ್ ತನ್ನ ಮನೆಯನ್ನು ಸರಿಪಡಿಸಿಕೊಳ್ಳಬೇಕು. ನಮ್ಮ ಪಕ್ಷದ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ. ನಮ್ಮ ಪಕ್ಷ ಹಾಗೂ ಕಾರ್ಯಕರ್ತರ ರಕ್ಷಣೆಗೆ ಶಾಸಕ ಬಿ.ಎನ್.ರವಿಕುಮಾರ್ ನಮ್ಮೊಂದಿಗೆ ಇದ್ದಾರೆ” ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ ಮುಖಂಡರು, ಕಾಂಗ್ರೆಸ್ ಪಕ್ಷದ ಒಳಗಿನ ಪುಟ್ಟು ಆಂಜಿನಪ್ಪ, ರಾಜೀವ್ ಗೌಡ ಮತ್ತು ಮಾಜಿ ಸಚಿವ ವಿ. ಮುನಿಯಪ್ಪ ಅವರ ಬಣಗಳ ನಡುವೆ ನಡೆಯುತ್ತಿರುವ ಜಗಳ, ಆರೋಪ-ಪ್ರತ್ಯಾರೋಪಗಳು ಜನರಿಗೆ “ಪುಕ್ಕಟೆ ಮನರಂಜನೆ” ನೀಡುತ್ತಿರುವುದಾಗಿ ವ್ಯಂಗ್ಯವಾಡಿದರು. ಇದೇ ವೇಳೆ, ಶಾಸಕರಾದ ಬಿ.ಎನ್. ರವಿಕುಮಾರ್ ಅವರು ಸಾದಲಿ ಮತ್ತು ಎಸ್. ದೇವಗಾನಹಳ್ಳಿ ಹಿಂದುಳಿದ ಪ್ರದೇಶಗಳಿಗೆ ಕೋಟ್ಯಂತರ ರೂಪಾಯಿಗಳ ಅನುದಾನ ಬಿಡುಗಡೆ ಮಾಡಿ ರಸ್ತೆ, ಚರಂಡಿ, ಕುಡಿಯುವ ನೀರು ಮತ್ತು ಸಮುದಾಯ ಭವನದಂತಹ ಮೂಲಸೌಕರ್ಯಗಳನ್ನು ಕಲ್ಪಿಸಿರುವುದನ್ನು ಕಾರ್ಯಕರ್ತರು ವಿವರಿಸಿದರು.

ಸಭೆಯಲ್ಲಿ ಮಾತನಾಡಿದ ಮುಖಂಡ ಆಂಜಿನಪ್ಪ, “ಈವರೆಗೆ 12 ಗ್ರಾಮ ಪಂಚಾಯಿತಿ ಸದಸ್ಯರಿದ್ದ ನಮ್ಮ ಶಕ್ತಿ, ಕಾಂಗ್ರೆಸ್‌ನ ಇಬ್ಬರು ಸದಸ್ಯರು ಮತ್ತು ಅವರ ಬೆಂಬಲಿಗರು ಜೆಡಿಎಸ್‌ಗೆ ಸೇರ್ಪಡೆಗೊಂಡ ಪರಿಣಾಮವಾಗಿ 14ಕ್ಕೆ ಏರಿದೆ. ನಮ್ಮ ಪಕ್ಷದಿಂದ ಕಾಂಗ್ರೆಸ್‌ಗೆ ಯಾರೂ ಹೋಗಿಲ್ಲ, ಬದಲಿಗೆ ಕಾಂಗ್ರೆಸ್‌ನವರು ನಮ್ಮತ್ತ ಬಂದಿದ್ದಾರೆ” ಎಂದು ಹೇಳಿದರು.

ಸಭೆಯಲ್ಲಿ ಪಕ್ಷ ಸಂಘಟನೆ, ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಾದಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ಪೆದ್ದಪ್ಪಯ್ಯ, ಜೆಡಿಎಸ್ ಮುಖಂಡರಾದ ತ್ಯಾಗರಾಜ್, ಆವುಲರೆಡ್ಡಿ (ವಿಜಯಾನಂದ), ಶಶಿಕಲಾ ಸುರೇಶ್, ಸೊಣಗಾನಹಳ್ಳಿ ನಾಗೇಂದ್ರ, ಚಾಕಪ್ಪನಹಳ್ಳಿ ಲಕ್ಷ್ಮೀನಾರಾಯಣ್, ಗೊಲ್ಲಹಳ್ಳಿ ನರಸಿಂಹರೆಡ್ಡಿ, ಬಿಎನ್‌ಎಲ್ ಮಂಜು, ವೇಣು, ಕೋಟಗಲ್ ಗೋಪಾಲರೆಡ್ಡಿ, ಮಣಿಕಂಠ ಹಾಗೂ ಅನೇಕ ಕಾರ್ಯಕರ್ತರು ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version