Doddatekahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸಪ್ಪನ ಬಾವಿ (Dyavappana Bavi Kalyani) ಕಲ್ಯಾಣಿಯನ್ನು ಬೃಹತ್ ಸ್ವಚ್ಛತಾ ಅಭಿಯಾನದಡಿಯಲ್ಲಿ ಭಾನುವಾರ ಸ್ವಚ್ಛತೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಇಒ ಆರ್. ಹೇಮಾವತಿ, “ಸುಮಾರು 400 ವರ್ಷಗಳ ಇತಿಹಾಸವುಳ್ಳ ದಾಸಪ್ಪನ ಬಾವಿಯು ಜಾಲಿಮರ, ಕಲ್ಲು-ಮುಳ್ಳುಗಳಿಂದ ಪಾಲು ಬಿದ್ದಿತ್ತು. ಸ್ವಚ್ಛತಾ ಅಭಿಯಾನದಡಿಯಲ್ಲಿ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ಸಾರ್ವಜನಿಕರು ಒಗ್ಗೂಡಿ ಕಲ್ಯಾಣಿ ಬಾವಿಯನ್ನು ಸ್ವಚ್ಛತೆ ಮಾಡುತ್ತಿದ್ದೇವೆ. ಜಲಮೂಲಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ಉಳಿಸಿಕೊಳ್ಳುವುದು ನಮ್ಮ ಉದ್ದೇಶವಾಗಿದೆ” ಎಂದು ಹೇಳಿದರು.
ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ದೊಡ್ಡತೇಕಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಮ್ಮ, ಉಪಾಧ್ಯಕ್ಷ ಮಂಜುನಾಥ, ಪಿಡಿಒ ವಜ್ರೇಶ್, ವಿವಿಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಮತ್ತು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಹಾಗೂ ನರೇಗಾ ಸಿಬ್ಬಂದಿ ಸೇರಿದಂತೆ ಸ್ಥಳೀಯರು ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾಗಿದ್ದರು.