24.1 C
Sidlaghatta
Wednesday, December 24, 2025

ಅಂಬೇಡ್ಕರ್ ಭವನಕ್ಕೆ ಭೂಮಿ ಪೂಜೆ

- Advertisement -
- Advertisement -

Sidlaghatta : ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಅಂಗವಾಗಿ ಏಪ್ರಿಲ್ 14ರಂದು ಶಿಡ್ಲಘಟ್ಟದಲ್ಲಿ ಅಂಬೇಡ್ಕರ್ ಭವನದ ಭೂಮಿ ಪೂಜೆ ವಿಜೃಂಭಣೆಯಿಂದ ನಡೆಯಲಿದೆ. ಎಲ್ಲ ಜಾತಿ, ಧರ್ಮ ಹಾಗೂ ರಾಜಕೀಯ ಪಕ್ಷಗಳಿಂದ ಮೀರಿ ಜನಸಾಮಾನ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅದನ್ನು ಸ್ಮರಣೀಯ ಘಟನೆಯಾಗಿ ರೂಪಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಗಂಜಿಗುಂಟೆ ನರಸಿಂಹಮೂರ್ತಿ ಕರೆ ನೀಡಿದರು.

ಶುಕ್ರವಾರ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಗರದ ತೋಟಗಾರಿಕೆ ಕಚೇರಿ ಆವರಣದಲ್ಲಿ ಜಾಗವನ್ನು ಗುರುತಿಸಲಾಗಿದೆ. ಈ ಸ್ಥಳದಲ್ಲಿ ಬಹುಕಾಲದ ಕನಸು ಸಾಕಾರವಾಗುತ್ತಿದೆ. ಕಳೆದ 30 ವರ್ಷಗಳಿಂದ ನಾವು ಈ ಬೇಡಿಕೆಯನ್ನು ಮುಂದಿಟ್ಟಿದ್ದೆವು. ಇದೀಗ ಅದು ನೆರವೇರುತ್ತಿದೆ,” ಎಂದು ಸಂತಸ ವ್ಯಕ್ತಪಡಿಸಿದರು.

ಅಂದಿನ ದಿನವೇ ಶಿಕ್ಷಕರ ಭವನ ಹಾಗೂ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೂ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು. ಶಾಸಕ ಬಿ.ಎನ್. ರವಿಕುಮಾರ್ ಅವರು ವಿಶೇಷ ಆಸಕ್ತಿ ವಹಿಸಿ, 10 ಕೋಟಿಗೂ ಹೆಚ್ಚು ಅನುದಾನದೊಂದಿಗೆ ಅತ್ಯಾಧುನಿಕ ಹಾಗೂ ಮಾದರಿಯಾದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ ಎಂದು ಅವರು ವಿವರಿಸಿದರು.

ಈ ಮಹತ್ವದ ದಿನದಂದು ಪ್ರತಿಭಾವಂತ 100 ವಿದ್ಯಾರ್ಥಿಗಳಿಗೆ ಪುರಸ್ಕಾರ ಪ್ರದಾನ, ಜನಪದ ಕಲಾ ತಂಡಗಳ ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಶಿಡ್ಲಘಟ್ಟ ತಾಲ್ಲೂಕು ಆಡಳಿತವು ಶಾಸಕರ ಮಾರ್ಗದರ್ಶನದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯಸಭೆಯ ಮಾಜಿ ಸದಸ್ಯ ಎಲ್. ಹನುಮಂತಯ್ಯ, ನಿವೃತ್ತ ಸಂರಕ್ಷಣಾಧಿಕಾರಿ ವೆಂಕಟನಾರಾಯಣಮ್ಮ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ. ಜೊತೆಗೆ ಶಾಸಕ ಬಿ.ಎನ್. ರವಿಕುಮಾರ್, ಸಂಸದ ಮಲ್ಲೇಶ್ ಬಾಬು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್, ಸಚಿವ ಕೆ.ಎಚ್. ಮುನಿಯಪ್ಪ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿರಲಿದ್ದಾರೆ.

“ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿಸಿ” ಎಂದು ನುಡಿದ ಅವರು, ಸಮಾರಂಭದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ತಾತಹಳ್ಳಿ ಚಲಪತಿ, ಸಂಘಟನಾ ಸಂಚಾಲಕ ಲಕ್ಕೇನಹಳ್ಳಿ ವೆಂಕಟೇಶ್, ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ ನರಸಿಂಹರಾಜು ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!