Home News ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ ಓದು ಕಾರ್ಯಕ್ರಮ

ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ ಓದು ಕಾರ್ಯಕ್ರಮ

0
Sidlaghatta Ambedkar

Sidlaghatta : ಶಿಡ್ಲಘಟ್ಟ ನಗರದ ಅಕ್ಷರ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಕ್ಷರ ಪದವಿ ಪೂರ್ವ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ ಓದು ಕಾರ್ಯಕ್ರಮ”ದ ಪ್ರಯುಕ್ತ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಜಿಲ್ಲಾ ಘಟಕದ ದಲಿತ ಸಂಘರ್ಷ ಸಮಿತಿಯ ಸಂಚಾಲಕರಾದ ವೆಂಕಟೇಶ್ ಅವರು ಮಾತನಾಡಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ ಇಂದು ಭಾರತ ಸದೃಢ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ರಚಿಸಿದ್ದಾರೆ. ಅರ್ಥಪೂರ್ಣ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನೀಡಿದ್ದಾರೆ. ಅವರ ಕಠಿಣ ಶ್ರಮದಿಂದಾಗಿ ಶೋಷಿತ ಸಮುದಾಯಗಳು, ರೈತರು, ಮಹಿಳೆಯರು ಕಾರ್ಮಿಕರು ಇತರೆ ವರ್ಗದವರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಇಂದಿನ ಯುವಜನತೆಗೆ ಅಂಬೇಡ್ಕರ್ ಅವರು ಮಾದರಿಯಾಗಿದ್ದು, ಅವರು ನಡೆದ ದಾರಿಯಲ್ಲಿ ನಾವೇಲ್ಲರೂ ಸಾಗಬೇಕಾಗಿದೆ ಎಂದರು.

ಅಂಬೇಡ್ಕರ್ ರವರ ವಿಚಾರಗಳನ್ನು ಅರಿತುಕೊಂಡು ವಿದ್ಯಾರ್ಥಿಗಳು ಅವರ ಪುಸ್ತಕಗಳನ್ನು ಓದುವ ಮೂಲಕ ಪ್ರಜ್ಞಾವಂತರಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪಿ.ಎಸ್.ರಾಜೇಶ್ವರಿ ಮಾತನಾಡಿ, ವಿದ್ಯಾರ್ಥಿಗಳ ಜ್ಞಾನ ವಿಸ್ತಾರಗೊಳಿಸಲು ಸರ್ಕಾರವು ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಅನುಷ್ಠಾನ ಮಾಡಿದೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

“ಅಂಬೇಡ್ಕರ್ ಓದು ಕಾರ್ಯಕ್ರಮ”ದ ಪ್ರಯುಕ್ತ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶ್ರೀ ಯೋಗಿ ನಾರಾಯಣ ಎಜುಕೇಷನಲ್ ಟ್ರಸ್ಟ್ ಸದಸ್ಯ ಬಿ.ವಿ.ರಮೇಶ್, ಸುಮಂತ್, ಅಕ್ಷರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ವಿ.ಪ್ರಕಾಶ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version