ಆಶಾ ಕಾರ್ಯಕರ್ತೆಯರು ಕೆಲಸವನ್ನು ಸ್ಥಗಿತಗೊಳಿಸಿ ಪ್ರತಿಭಟನೆ

- Advertisement -
- Advertisement -

ನಗರದಲ್ಲಿ ಎ.ಐ.ಸಿ.ಟಿ.ಯು ಸಂಘಟನೆಯ ಮೂಲಕ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶುಕ್ರವಾರ ಕೆಲಸವನ್ನು ಸ್ಥಗಿತಗೊಳಿಸಿ ಮನವಿಯನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಅವರಿಗೆ ಸಲ್ಲಿಸಿದರು.

  ಆಶಾ ಕಾರ್ಯಕರ್ತೆಯರಿಗೆ ಈಗ ಇರುವ ಪ್ರೋತ್ಸಾಹಧನ ಮತ್ತು ಗೌರವಧನ ಎರಡನ್ನೂ ಒಟ್ಟಿಗೆ ಸೇರಿಸಿ ಮಾಸಿಕ ಹನ್ನೆರಡು ಸಾವಿರ ರೂ ಗೌರವಧನ ನಿಗಧಿಪಡಿಸಬೇಕು. ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಅಗತ್ಯವಾದ ಮಾಸ್ಕ್, ಗ್ಲೌಸ್, ಫೇಸ್ ಶೀಲ್ಡ್ ಮತ್ತು ಸ್ಯಾನಿಟೈಸರ್ ಇತ್ಯಾದಿ ಸಂರಕ್ಷಣಾ ಸಾಮಗ್ರಿಗಳನ್ನು ನೀಡಬೇಕು. ಪಾಸಿಟೀವ್ ಬಂದಿರುವ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು ಮತ್ತು ಚಿಕಿತ್ಸೆಯ ಅವಧಿಯಲ್ಲಿ ಸಂಪೂರ್ಣ ಗೌರವಧನ ನೀಡಬೇಕೆಂದು ಒತ್ತಾಯಿಸಿದರು.

 ಸರ್ಕಾರ ಇದುವರೆಗೂ ನಮ್ಮ ಬೇಡಿಕೆಗಳನ್ನು ಪರಿಗಣಿಸದಿರುವುದರಿಂದ ಅನಿವಾರ್ಯವಾಗಿ ಜುಲೈ 10 ರಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ನಾವು ಹೋರಾಟ ನಡೆಸಿದ್ದೇವೆ ಎಂದರು.

 ಆಶಾ ಕಾರ್ಯಕರ್ತೆಯರ ಸಂಘದ ಸುಶೀಲಾ, ನಾಗರತ್ನ, ಶಾಮಲ, ಕನಕಮ್ಮ, ಶಿವಮ್ಮ, ವಿಜಯಲಕ್ಷ್ಮಿ, ಲಕ್ಷ್ಮೀದೇವಿ, ನೇತ್ರಾವತಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!