Melur, Sidlaghatta : ಒಂದು ದೇಶ ಸುಭದ್ರವಾಗಿ ಇರಬೇಕಾದರೆ, ಅಭಿವೃದ್ದಿಯ ಹಾದಿಯಲ್ಲಿ ಸಾಗಬೇಕಾದರೆ ಉತ್ತಮ ಆಡಳಿತ ವ್ಯವಸ್ಥೆ ಇರಬೇಕು. ಜತೆಗೆ ದೇಶದ ಎಲ್ಲರೂ ದೈಹಿಕ ಹಾಗೂ ಮಾನಸಿಕವಾಗಿ ಉತ್ತಮ ಸ್ಥಿತಿಯಲ್ಲಿರಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಅವರ ಗೃಹಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಆಶಾ ಕಿರಣ ಕಾರ್ಯಕ್ರಮದಡಿ ಕನ್ನಡಗಳನ್ನು ವಿತರಿಸಿ ಅವರು ಮಾತನಾಡಿದರು.
ನಾವು ನಮ್ಮ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ದೇಹದ ಎಲ್ಲ ಅಂಗಾಂಗಳೂ ಬಹಳ ಮುಖ್ಯ. ಅದರಲ್ಲೂ ಕಣ್ಣು ಕವಿ ಮೂಗು ನಾಲಿಗೆಯಂತ ಪಂಚೇಂದ್ರಿಯಗಳು ಉತ್ತಮವಾಗಿ ಕಾರ್ಯನಿರ್ವಹಿಸಿದಾಗಲೆ ನಾವು ಉತ್ತಮ ಬದುಕು ನಡೆಸಲು ಸಾಧ್ಯ ಎಂದರು.
ಈ ನಿಟ್ಟಿನಲ್ಲಿ ಕಣ್ಣು ಸೇರಿದಂತೆ ಎಲ್ಲ ಅಂಗಾಗಳ ರಕ್ಷಣೆ, ಸೂಕ್ತ ನಿರ್ವಹಣೆಗೆ ನಾವು ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರವು ಹಲವು ಯೋಜನೆಗಳನ್ನು ರೂಪಿಸಿದ್ದು, ಅರಿವು ಮೂಡಿಸುತ್ತಿದೆ. ಈ ಯೋಜನೆಗಳನ್ನು ಬಳಸಿಕೊಂಡು ನಮ್ಮ ಆರೋಗ್ಯ ಮಟ್ಟವನ್ನು ಉತ್ತಮಪಡಿಸಿಕೊಳ್ಳಬೇಕೆಂದರು.
ಮೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 2,300 ಮಂದಿಗೆ ಕನ್ನಡಕಗಳನ್ನು ಉಚಿತವಾಗಿ ಆಶಾಕಿರಣ ಯೋಜನೆಯಡಿ ವಿತರಿಸಲಾಯಿತು. ತಾಲ್ಲೂಕಿನ ಉಳಿದ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಇನ್ನುಳಿದ ಎಲ್ಲರಿಗೂ ಕನ್ನಡಗಳನ್ನು ವಿತರಿಸಲಾಗುವುದು ಎಂದು ವಿವರಿಸಿದರು.
ಇಂದು ದೇಶದಲ್ಲಿ ವೈದ್ಯರ ದಿನಾಚರಣೆ ಮಾಡುತ್ತಿದ್ದು ಎಲ್ಲ ವೈದ್ಯರಿಗೂ ವೈದ್ಯರ ದಿನಾಚರಣೆಯ ಶುಭಾಷಯಗಳನ್ನು ತಿಳಿಸಿದರು.
ತಾಲ್ಲೂಕು ಆರೋಗ್ಯಾಕಾರಿ ಡಾ.ವೆಂಕಟೇಶ್‌ಮೂರ್ತಿ, ಮೇಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ.ರಮೇಶ್, ಆರೋಗ್ಯ ನಿರೀಕ್ಷಣಾಕಾರಿ ದೇವರಾಜ್, ಆರೋಗ್ಯ ಸುರಕ್ಷಣಾಕಾರಿ ಮುನಿರತ್ನಮ್ಮ, ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ದೇವರಾಜ್, ನಂದಿನಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತಾದೂರು ರಘು ಹಾಜರಿದ್ದರು.