
Sidlaghatta, chikkaballapur : ಶಿಡ್ಲಘಟ್ಟ ನಗರದ ತೈಬಾನಗರದಲ್ಲಿರುವ ಪಿ.ಎಂ.ಶ್ರೀ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ಚಿಕ್ಕಬಳ್ಳಾಪುರದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ತಾಲ್ಲೂಕಿಗೆ ಹೆಮ್ಮೆಯನ್ನು ತಂದಿದ್ದಾರೆ.
ಇತ್ತೀಚೆಗೆ ನಡೆದ 14 ವರ್ಷದೊಳಗಿನ ವಿಭಾಗದ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಾದ ಸಭಾಕೌಸರ್, ಸಾಯೇರಾ ತಾಜ್, ಮೆಹಕ್, ಸಲ್ಮಾ ತಾಜ್, ಸಮ್ರಿನ್ ತಾಜ್ ಮತ್ತು ಸಾಧಿಕ್ ಶ್ರೇಷ್ಠ ಕೌಶಲ್ಯ ತೋರಿಸಿ ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಕರಾಟೆ ತರಬೇತುದಾರ ಮಹಮ್ಮದ್ ಇನಾಯಿತುಲ್ಲಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ತರಬೇತಿ ಪಡೆದುಕೊಂಡಿದ್ದು, ಶಾಲೆಯ ಮುಖ್ಯಶಿಕ್ಷಕ ಎಸ್. ಮುಝಫಿರ್ ಅವರು ಅವರ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು.