
ಶಿಡ್ಲಘಟ್ಟ ನಗರದ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರ ಜನ್ಮದಿನದ ಅಂಗವಾಗಿ ನಾಗರಿಕರಿಗೆ ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣಾ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಎಂ.ರಾಜಣ್ಣ ಚಾಲನೆ ನೀಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ರವರ ಜನ್ಮದಿನದ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ನೇಕಾರರ ಪ್ರಕೋಷ್ಠ, ಭಾರತೀಯ ಜನತಾ ಪಾರ್ಟಿ ಹಾಗೂ ವಿವಿಧ ಮೋರ್ಚಾಗಳ ಸಹಭಾಗಿತ್ವದಲ್ಲಿ ಉಚಿತ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಿ ನಾಗರಿಕರಿಗೆ ಉಚಿತವಾಗಿ ಕಾರ್ಡ್ ಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ನೇಕಾರರ ಪ್ರಕೋಷ್ಠದ ಸಂಚಾಲಕರಾದ ನಾಗಭೂಷಣ್, ಸಹ ಸಂಚಾಲಕರಾದ ನಾಗೇಶ್, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಂಜನೇಯಗೌಡ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಹ ಸಂಚಾಲಕರಾದ ಮಂಜು ಕಿರಣ್, ಕಾರ್ಮಿಕ ಪ್ರಕೋಷ್ಠ ಜಿಲ್ಲಾ ಸಹ ಸಂಚಾಲಕ ನರೇಶ್, ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾ ಮುಖಂಡರಾದ ಮಂಜುಳಾ ಸುರೇಶ್, ರತ್ನಮ್ಮ, ಶಾರದಮ್ಮ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi