ಏ.24ರಂದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಂ ಜಯಂತಿ

- Advertisement -
- Advertisement -

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನದಲ್ಲಿ ಏ.24ರಂದು ಶುಕ್ರವಾರ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಂ ಅವರ ಜಯಂತಿಯನ್ನು ಆಚರಿಸಲಾಗುವುದು ಎಂದು ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಮ ಗೆಳೆಯರ ಬಳಗದ ಮುಖ್ಯಸ್ಥ ಕುಂದಲಗುರ್ಕಿ ಮುನೀಂದ್ರ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌದರಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇರಲಿದ್ದು ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಕಾವೇರಿ ಹ್ಯಾಂಡ್ ಲೂಮ್ಸ್ ಅಧ್ಯಕ್ಷ ಬಯ್ಯಪ್ಪನಹಳ್ಳಿ ಗಣೇಶ್, ಜನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್, ಜಿಲ್ಲಾಧಿಕಾರಿ ಜಿ.ಪ್ರಭು, ಸಿಇಒ ಡಾ.ನವೀನ್ ಭಟ್ ವೈ, ಎಸ್ಪಿ ಕುಶಲ್ ಚೌಕ್ಸೆ, ಬಿಸಿಎಂ ಜಿಲ್ಲಾ ಅಧಿಕಾರಿ ಕೆ.ವಿ.ಮುನಿರತ್ನಮ್ಮ, ಅಂಬೇಡ್ಕರ್ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಮಂಜನಕುಮಾರ್, ತಹಶೀಲ್ದಾರ್ ಎನ್.ಗಗನಸಿಂಧು, ತಾ.ಪಂ.ಇಒ ಆರ್.ಹೇಮಾವತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್, ಟಿ.ಎಚ್‌.ಒ ಡಾ.ವೆಂಕಟೇಶ್ ಮೂರ್ತಿ, ಸರ್ಕಲ್ ಇನ್ಸ್‌ ಪೆಕ್ಟರ್ ಆನಂದಕುಮಾರ್, ಸಿಡಿಪಿಒ ವಿದ್ಯಾ ವಸ್ತ್ರದ್, ಜಯಪ್ಪ, ಅಬೂಬಕರ್ ಸಿದ್ದೀಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಎಬಿಡಿ ಟ್ರಸ್ಟ್ ಅಧ್ಯಕ್ಷ ರಾಜೀವ್‌ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ, ಮೇಲೂರು ಮಂಜುನಾಥ್, ಪುಟ್ಟು ಆಂಜಿನಪ್ಪ, ನರಸಿಂಹಮೂರ್ತಿ, ಲಕ್ಷ್ಮಣರಾಜು, ಕುಂದಲಗುರ್ಕಿ ವೆಂಕಟೇಶಪ್ಪ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದರು.

ಸಂಜೆ ಬಿಗ್ ಬಾಸ್ ಖ್ಯಾತಿಯ ತುಕಾಲಿ ಸಂತು ತಂಡದವರಿಂದ ರಸ ಸಂಜೆ ಕಾರ್ಯಕ್ರಮವಿರಲಿದ್ದು ತನಿಷ ಕುಪ್ಪಂಡ ಇನ್ನಿತರೆ ಕಿರುತೆರೆಯ ತಾರೆಯರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. ಬಳಗದ ಕೆ.ಸಿ.ಆನಂದ್, ಚಂದ್ರಶೇಖರ್, ವೆಂಕಟೇಶ್, ರಘು, ಪವನ್ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!