Home News ಡಾ.ಬಾಬು ಜಗಜೀವನರಾಂ ಜನ್ಮ ದಿನಾಚರಣೆ

ಡಾ.ಬಾಬು ಜಗಜೀವನರಾಂ ಜನ್ಮ ದಿನಾಚರಣೆ

0
Sidlaghatta Babu Jagjivan Ram Birth Anniversary

Sidlaghatta : ದೇಶದಲ್ಲಿ ತಲೆದೋರಿದ ಆಹಾರ ಸಮಸ್ಯೆ ಹೋಗಲಾಡಿಸಿ, ಹಸಿರು ಕ್ರಾಂತಿಗೆ ಕಾರಣರಾದ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬುಜಗಜೀವನರಾಂ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ ೧೧೯ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜ ಸುಧಾರಣೆ ಹಾಗೂ ಎಲ್ಲರೂ ಸಮಾನವಾಗಿ ಜೀವನ ನಡೆಸಬೇಕು ಎನ್ನುವ ಮಹತ್ವಾಕಾಂಕ್ಷೆಯನ್ನು ಅವರು ಹೊಂದಿದ್ದರು. ಕಾರ್ಮಿಕರ ಏಳಿಗೆಯನ್ನು ಸದಾ ಬಯಸುತ್ತಿದ್ದರು. ದೇಶದ ಜನರು ಆಹಾರ ಕೊರತೆ ಅನುಭವಿಸುತ್ತಿರುವುದನ್ನು ಕಂಡು ಹಸಿರು ಕ್ರಾಂತಿ ಪ್ರಾರಂಭಿಸಲು ನೆರವಾದರು. ದೇಶದ ಸರ್ವಾಂಗೀಣ ಶ್ರೇಯೋಭಿವೃದ್ಧಿಗೆ ನೀಡಿದ ಅವರ ಕೊಡುಗೆ ಅಪಾರ ಎಂದರು.

ತಹಸೀಲ್ದಾರ್ ಎನ್.ಗಗನಸಿಂಧೂ ಮಾತನಾಡಿ, ದೇಶಾದ್ಯಂತ ‘ಬಾಬುಜಿ’ ಎಂದೇ ಕರೆಯಲ್ಪಡುವ ಜಗಜೀವನ ರಾಮ್ ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಹೋರಾಟಗಾರ ಹಾಗೂ ಅತ್ಯುತ್ತಮ ಸಂಸದೀಯ ಪಟುವಾಗಿದ್ದರು. ಬಾಬು ಜಗಜೀವನ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರಾಗಿ, ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಮತ್ತು ಮೊದಲ ಉಪ ಪ್ರಧಾನಿಯಾಗಿ ನಮ್ಮ ದೇಶಕ್ಕೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದರು.

ಚಿಮುಲ್ ನಿರ್ದೇಶಕರಾದ ಬಂಕ್ ಮುನಿಯಪ್ಪ, ಹುಜಗೂರು ರಾಮಣ್ಣ, ತಾ.ಪಂ ಇಓ ಹೇಮಾವತಿ.ಆರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ನಗರಸಭೆ ಪೌರಾಯುಕ್ತೆ ಅಮೃತಾ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಸಮುದಾಯದ ಮುಖಂಡರು ಹಾಜರಿದ್ದರು

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version