ನವಂಬರ್ 16 ರ ಶನಿವಾರದಂದು ವಿದ್ಯುತ್ ಅದಾಲತ್, ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತಾ ಸಭೆಯನ್ನು ಹಮ್ಮಿಕೊಂಡಿರುವಾದಾಗಿ BESCOM ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಪ್ರಭು ತಿಳಿಸಿದ್ದಾರೆ
ಶನಿವಾರದಂದು ಮಧ್ಯಾಹ್ನ 03 ಗಂಟೆಯಿಂದ ಸಂಜೆ 05 ರ ವರೆಗೆ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತೆಯ ಬಗ್ಗೆ ಮನವರಿಕೆ ಮಾಡುವ ನಿಟ್ಟಿನಲ್ಲಿ ವಿದ್ಯಾತ್ ಸುರಕ್ಷತಾ ಸಭೆಯನ್ನು ಶಿಡ್ಲಘಟ್ಟ ಬೆಸ್ಕಾಂ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿರುತ್ತದೆ.
ಶಿಡ್ಲಘಟ್ಟ ತಾಲ್ಲೂಕಿನ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರ ಸಭೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ರೈತ ಸಂಘದ ಮುಖಂಡರು, ಶಿಡ್ಲಘಟ್ಟ ತಾಲ್ಲೂಕಿನ ಎಲ್ಲಾ ಗ್ರಾಹಕರು ಭಾಗವಹಿಸಿ ತಮ್ಮ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಕೊಳ್ಳಬೇಕೆಂದು ಹಾಗೂ ವಿದ್ಯುತ್ ಸುರಕ್ಷತೆಯ ಬಗ್ಗೆ ತಿಳಿಯಲು ಸಭೆಗೆ ಆಗಮಿಸಬೇಕೆಂದು ಶಿಡ್ಲಘಟ್ಟ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಪ್ರಭು ಕೋರಿದ್ದಾರೆ.
For Daily Updates WhatsApp ‘HI’ to 7406303366









