24.1 C
Sidlaghatta
Thursday, April 18, 2024

ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ರಕ್ತದಾನ ಶಿಬಿರ

- Advertisement -
- Advertisement -

ಶಿಡ್ಲಘಟ್ಟ ತಾಲ್ಲೂಕಿನ ಅಬ್ಲೂಡು ಗ್ರಾಮದಲ್ಲಿ ಗುರುವಾರ ಸ್ವಾತಂತ್ರ ಹೋರಾಟಗಾರ ಚಂದ್ರಶೇಖರ ಆಜಾದ್ ಸ್ಮರಣಾರ್ಥ, ರಾಷ್ಟ್ರೋತ್ಥಾನ ರಕ್ತ ನಿಧಿ ಹಾಗೂ ಬಿಜೆಪಿ ಗ್ರಾಮಾಂತರ ಮಂಡಲ ವತಿಯಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾಜಿ ಶಾಸಕ ಎಂ.ರಾಜಣ್ಣ ಅವರು ಮಾತನಾಡಿದರು.

ದಾನಗಳಲ್ಲೇ ಶ್ರೇಷ್ಟವಾದುದು ರಕ್ತದಾನವಾಗಿದೆ. ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ, ವಿಜ್ಞಾನ ಎಷ್ಟೇ ಮುಂದುವರೆದರೂ ಕೃತಕ ರಕ್ತ ಸೃಷ್ಟಿಸಲು ಸಾಧ್ಯವಿಲ್ಲ. ಅಪಘಾತಗಳಂತಹ ತುರ್ತು ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇದ್ದು ದಾನಿಗಳಿಂದ ಸಂಗ್ರಹವಾದ ರಕ್ತ ಮತ್ತೊಬ್ಬರ ಜೀವ ರಕ್ಷಣೆ ಮಾಡಲಿದೆ. ನಾವು ನೀಡುವ ಒಂದು ಯೂನಿಟ್ ರಕ್ತ ಒಂದು ಜೀವವನ್ನು ಉಳಿಸುತ್ತದೆ. ಹಾಗಾಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವ ಉಳಿಸುವ ಕೆಲಸದಲ್ಲಿ ಭಾಗಿಯಾಗಬೇಕು ಎಂದು ಅವರು ಹೇಳಿದರು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರಗೌಡ ಮಾತನಾಡಿ, ರಕ್ತದಾನ ಮಹಾದಾನ. ಕೊರೊನದ ಸಮಯದಲ್ಲಿ ಜನರು ಹೊರಬರದೆ, ರಕ್ತದಾನಿಗಳ ಕೊರತೆಯಿಂದಾಗಿ ರಕ್ತದ ಕೊರತೆ ಉಂಟಾಗಿದೆ. ಜೀವ ರಕ್ಷಕವಾದ ರಕ್ತವನ್ನು ದಾನ ಮಾಡಲು ಜನರು ಮುಂದೆ ಬರಬೇಕು. ರಕ್ತವನ್ನು ಉತ್ಪಾದನೆ ಮಾಡಲು ಸಾದ್ಯವಿಲ್ಲ ಇನ್ನೊಬ್ಬರಿಂದ ಪಡೆದೇ ರಕ್ತ ನೀಡಬೇಕು. ಪ್ರತಿ ಆರೋಗ್ಯವಂತ ಯುವಕರು ಪ್ರತಿ 3 ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ. ಕಳೆದ 4 ವರ್ಷಗಳಿಂದ ಬಿಜೆಪಿ ಪಕ್ಷದ ವತಿಯಿಂದ ಉಚಿತ ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ ಎಂದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಿ.ಸಿ.ನಂದೀಶ್, ಬಿಜೆಪಿ ಹಿರಿಯ ಮುಖಂಡರಾದ ದಾಮೋಧರ್, ಸುಜಾತಮ್ಮ, ಕೆ.ಎಸ್.ಕನಕಪ್ರಸಾದ್, ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಂಜನೇಯಗೌಡ, ಮಹಿಳಾ ಮೋರ್ಚಾದ ನರ್ಮದಾರೆಡ್ಡಿ, ಹಾಜರಿದ್ದರು.

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!