BJP ಸಂಸ್ಥಾಪನಾ ದಿನಾಚರಣೆ

- Advertisement -
- Advertisement -

Sidlaghatta : ದೇಶವನ್ನು ಬೌಗೋಳಿಕವಾಗಿ ಸಂರಕ್ಷಣೆ ಮಾಡುವುದು ಸೇರಿದಂತೆ ದೇಶದ ಜನರಲ್ಲಿ ಸಂಸ್ಕೃತಿ ಹಾಗು ಸಂಸ್ಕಾರವನ್ನು ಬೆಳೆಸುವ ದೃಷ್ಠಿಯಿಂದ ಸ್ಥಾಪಿಸಿದ ಜನಸಂಘ ನಂತರದ ದಿನಗಳಲ್ಲಿ ಭಾರತೀಯ ಜನತಾ ಪಕ್ಷವಾಗಿ ಇದೀಗ ದೇಶಾಧ್ಯಂತ ವಿಸ್ತರಿಸಿದೆ ಎಂದರೆ ಅದಕ್ಕೆ ಶ್ಯಾಮ್ ಪ್ರಸಾದ್ ಮುಖರ್ಜಿ ಹಾಗು ಪಂಡಿತ್ ದೀನದಯಾಳ್ ಉಪಾಧ್ಯಾಯರ ಶ್ರಮವೇ ಕಾರಣ ಎಂದು ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ ತಿಳಿಸಿದರು.

ನಗರದ ಬಿಜೆಪಿ ಸೇವಾಸೌಧ ಕಚೇರಿಯ ಆವರಣದಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

1980 ರ ಏಪ್ರಿಲ್ 6 ರಂದು ಸ್ಥಾಪನೆಯಾದ ಭಾರತೀಯ ಜನತಾಪಕ್ಷವು ಇಂದು ಕೇಂದ್ರ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿದೆ ಎಂದರೆ ಇದಕ್ಕೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೆರಿದಂತೆ ಮುಖಂಡರು ಕಾರಣರಾಗಿದ್ದಾರೆ. ಇಡೀ ವಿಶ್ವವೇ ನಮ್ಮ ದೇಶದ ಕಡೆ ತಿರುಗಿ ನೋಡುವಂತೆ ಮಾಡಿದ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಹಾಲಿ ಪ್ರಧಾನಿ ನರೇಂದ್ರ ಮೋದಿಯಂತಹ ಮಹಾ ನಾಯಕರನ್ನು ಸೃಷ್ಠಿಸಿದ ಶಕ್ತಿ ಬಿಜೆಪಿ ಪಕ್ಷಕ್ಕೆ ಮಾತ್ರ ಇದೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ರಾಜಣ್ಣ, ನಗರ ಮಂಡಲ ಅಧ್ಯಕ್ಷ ದೇವರಾಜ್, ಮಾಜಿ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರಗೌಡ, ಕಾರ್ಯಕರ್ತರಾದ ರೂಪಸಿರಮೇಶ್, ಶ್ರೀನಿವಾಸ್, ನರೇಶ್, ಪುರುಶೋತ್ತಮ್, ನಾರಾಯಣಸ್ವಾಮಿ, ಚಾತುರ್ಯ, ಮಂಜುಳ ಮತ್ತಿತರರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!