BJP ದಲಿತರ ವಿರೋಧಿ ಎಂದು Congress ನವರಿಂದ ಅಪಪ್ರಚಾರ

- Advertisement -
- Advertisement -

Sidlaghatta : BJP ಯು ಸಂವಿಧಾನ ವಿರೋಧಿ, ಮೀಸಲಾತಿ ವಿರೋಧಿ ಹಾಗೂ ದಲಿತರ ವಿರೋಧಿ ಎಂದು Congress ನವರು ಅಪ ಪ್ರಚಾರ ಮಾಡುತ್ತಿದ್ದು ಅದು ಶುದ್ಧ ಸುಳ್ಳು ಎಂಬುದನ್ನು ನಾವು ಎಲ್ಲರಿಗೂ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಬಿಜೆಪಿಯ ಸದಸ್ಯತ್ವ ನೋಂದಣಿ ಅಭಿಯಾನದ ಉಸ್ತುವಾರಿ ವಹಿಸಿರುವ ಎಮ್ಮೆಲ್ಸಿ ಛಲವಾದಿ ನಾರಾಯಣಸ್ವಾಮಿ ನಗರದ ಬಿಜೆಪಿ ಕಚೇರಿಗೆ ಸೋಮವಾರ ಭೇಟಿ ನೀಡಿ ಪದಾಧಿಕಾರಿಗಳ ಜತೆ ಅಭಿಯಾನದ ಪರಮಾರ್ಶೆ ಮಾಡಿ, ಮಾತನಾಡಿದರು.

ಕಾಂಗ್ರೆಸ್ ಪಕ್ಷವು ಮಾಡುತ್ತಿರುವ ಎಲ್ಲ ಆರೋಪಗಳು ರಾಜಕೀಯವಾಗಿ ಸುಳ್ಳು ಆರೋಪಗಳು ಎಂಬುದು ಎಲ್ಲರಿಗೂ ಅರ್ಥವಾಗಿದೆ ಎಂದರು.

ಹಾಗಾಗಿಯೆ ನಮ್ಮ ಪಕ್ಷದೊಂದಿಗೆ ದಲಿತರು, ಅಲ್ಪ ಸಂಖ್ಯಾತರು ಸೇರಿ ಎಲ್ಲ ವರ್ಗದವರೂ ಕೂಡ ಬೆಂಬಲಿಸುತ್ತಿದ್ದಾರೆ. ಇದರಿಂದಾಗಿಯೆ ದೇಶದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದರು.

ಇದೀಗ ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಬಿಜೆಪಿಯನ್ನು ಬೆಂಬಲಿಸುವ ಮತ್ತು ಬಿಜೆಪಿಯ ತತ್ವ ಸಿದ್ಧಾಂತಗಳಲ್ಲಿ ನಂಬಿಕೆ ಇಟ್ಟವರು ಮಾತ್ರವೇ ಪಕ್ಷದ ಸದಸ್ಯತ್ವವನ್ನು ಮಾಡಿಕೊಳ್ಳುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವವನ್ನು ನೋಂದಾಯಿಸಬೇಕೆಂದರು.

ಶಿಡ್ಲಘಟ್ಟದಲ್ಲಿಯೂ ಸುಮಾರು 23 ಸಾವಿರ ಸದಸ್ಯತ್ವವನ್ನು ಮಾಡಿಸಿದ್ದು ಇನ್ನುಳಿದ 17 ದಿನಗಳಲ್ಲಿ 27 ಸಾವಿರ ಸದಸ್ಯತ್ವವನ್ನು ಮಾಡಿಸಬೇಕೆಂದು ಸೂಚಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಸೀಕಲ್ ರಾಮಚಂದ್ರಗೌಡ, ಮಾಜಿ ಶಾಸಕ ಎಂ.ರಾಜಣ್ಣ, ಆನಂದಗೌಡ, ಕಂಬದಹಳ್ಳಿ ಸುರೇಂದ್ರಗೌಡ, ಡಾ.ಸತ್ಯನಾರಾಯಣರಾವ್, ಕನಕಪ್ರಸಾದ್, ನಾರಾಯಣಸ್ವಾಮಿ, ಆಂಜನೇಯಗೌಡ, ನರ್ಮದಾರೆಡ್ಡಿ, ನರೇಶ್, ರಜನೀಕಾಂತ್ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!