Home News ಕಾನೂನು ಸೌಲಭ್ಯ ಎಲ್ಲರಿಗೂ ಸಿಗಬೇಕು

ಕಾನೂನು ಸೌಲಭ್ಯ ಎಲ್ಲರಿಗೂ ಸಿಗಬೇಕು

0
Sidlaghatta Civil court Judge Law

ಹಣದ ಕೊರತೆಯಿಂದ ಜನ ಕಾನೂನು ಸೌಲಭ್ಯದಿಂದ ವಂಚಿತರಾಗಬಾರದು. ಅನಕ್ಷರಸ್ಥ ಮತ್ತು ಬಡ ವರ್ಗದವರಿಗೆ ಉಚಿತ ಕಾನೂನು ಸೇವೆಯನ್ನು ನೀಡುವ ಉದ್ದೇಶದಿಂದ ಉಚಿತ ಕಾನೂನು ಸೇವಾ ಕಾಯಿದೆ ಜಾರಿಗೆ ತರಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಯಮನಪ್ಪ ಕರೆಹನುಮಂತಪ್ಪ ತಿಳಿಸಿದರು.

ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಪೊಲೀಸ್ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಮಂಗಳವಾರ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘‘1987ರಲ್ಲಿ ಉಚಿತ ಕಾನೂನು ಸೇವೆ ಕಾಯಿದೆ ರೂಪುಗೊಂಡರೂ, ಜಾರಿಗೆ ಬಂದಿದ್ದು 1995ರಲ್ಲಿ. ಪ್ರಸ್ತುತ ತಾಲೂಕು, ಜಿಲ್ಲೆ , ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಕಾನೂನು ಸೇವಾ ಪ್ರಾಧಿಕಾರಗಳು ಕಾರ್ಯನಿರ್ವಹಿಸುತ್ತಿವೆ. ಆರ್ಥಿಕ ದುರ್ಬಲರಿಗೆ ಕಾನೂನು ನೆರವು, ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳುತ್ತಿವೆ. ಸಾಮಾಜಿಕ ಬದಲಾವಣೆಗಳಲ್ಲಿ ಕಾನೂನು ಸೇವಾ ಪ್ರಾಧಿಕಾರ ಮಹತ್ವದ ಪಾತ್ರ ವಹಿಸಿದೆ,’’ ಎಂದರು.

 ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ. ಚಂದ್ರಶೇಖರಗೌಡ ಮಾತನಾಡಿ, ಯಾರೊಬ್ಬರೂ ಕಾನೂನಿನ ಮೂಲಕ ಪರಿಹಾರ ಪಡೆದುಕೊಳ್ಳುವಲ್ಲಿ ವಂಚಿತರಾಗಬಾರದು. ಈ ಆಶಯದಡಿ ಜಾರಿಗೆ ತಂದಿರುವ ಕಾಯ್ದೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್ ಎ. ಪಚ್ಚಾಪುರೆ, ವಕೀಲರ ಸಂಘದ ಕಾರ್ಯದರ್ಶಿ ಎಂ.ಬಿ. ಲೋಕೇಶ್, ಹಿರಿಯ ವಕೀಲ ಸುಬ್ರಮಣ್ಯಪ್ಪ ಹಾಜರಿದ್ದರು. 

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

error: Content is protected !!
Exit mobile version