ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ

- Advertisement -
- Advertisement -

ರಾಜ್ಯ ಪೌರ ಸೇವಾ ಸಹಕಾರ ಸಂಘ ಹಾಗೂ ಶಿಡ್ಲಘಟ್ಟ ನಗರಸಭೆ ವತಿಯಿಂದ ನಗರದ ಚಿಂತಾಮಣಿ ರಸ್ತೆಯಲ್ಲಿರುವ ಉದ್ಯಾನವನದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪೌರಾಡಳಿತ ಇಲಾಖೆಯ ಯೋಜನಾ ನಿರ್ದೇಶಕಿ ರೇಣುಕ ಮಾತನಾಡಿದರು.

ಶಿಡ್ಲಘಟ್ಟ ನಗರದ ಸ್ವಚ್ಚತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ದುಡಿಯುವ ಪೌರಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಅವರು ತಿಳಿಸಿದರು.

ಖಾಯಂ ಪೌರಕಾರ್ಮಿಕರಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲಾ ಸವಲತ್ತುಗಳು ಸಕಾಲದಲ್ಲಿ ಸಿಗುತ್ತಿದೆ. ನೇರ ನೇಮಕಾತಿಯಡಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಕೆಲವೊಂದು ಸವಲತ್ತುಗಳು ದೊರೆಯುತ್ತಿಲ್ಲ. ಹಾಗಾಗಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ನಗರಸಭೆ ಆಡಳಿತ ಮಂಡಳಿ ಆಶ್ರಯ ಯೋಜನೆಯಡಿ ಆದ್ಯತೆ ಮೇಲೆ ನಿವೇಶನ ನೀಡುವ ಜೊತೆಗೆ ಮನೆಗಳನ್ನು ನಿರ್ಮಾಣ ಮಾಡಿಕೊಡುವಂತೆ ಮನವಿ ಮಾಡಿದರು.

ನಗರಸಭೆ ಅಧ್ಯಕ್ಷೆ ಸುಮಿತ್ರಾ ರಮೇಶ್ ಮಾತನಾಡಿ, ಎಲ್ಲರ ಆರೋಗ್ಯ ಸುಧಾರಣೆಗೆ ಶ್ರಮಿಸುವ ಪೌರಕಾರ್ಮಿಕರ ಆರೋಗ್ಯ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಪೌರಕಾರ್ಮಿಕರಿಗೆ ಅಗತ್ಯವಿರುವ ಸುರಕ್ಷತಾ ಪರಿಕರಗಳ ವಿತರಣೆ ಹಾಗೂ ಆರೋಗ್ಯ ತಪಾಸಣೆ ಕಾಲ ಕಾಲಕ್ಕೆ ನಡೆಸಲಾಗಿದೆ. ಪೌರ ಕಾರ್ಮಿಕರ ಶ್ರಮ ಹಾಗು ವೃತ್ತಿಯನ್ನು ಪ್ರತಿಯೊಬ್ಬ ನಾಗರಿಕರು ಗೌರವಿಸುವಂತಹ ಕೆಲಸವಾಗಬೇಕು ಎಂದರು.

ಪೌರಾಯುಕ್ತ ಆರ್.ಶ್ರೀಕಾಂತ್ ಮಾತನಾಡಿ, ಪೌರ ಕಾರ್ಮಿಕರಿಗೆ ಈ ಹಿಂದೆ ನಿಡಲಾಗುತ್ತಿದ್ದ 3500 ರೂ ವಿಶೇಷ ಭತ್ಯೆ ಇದೀಗ 7000 ಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ಪೌರ ಕಾರ್ಮಿಕರಿಗೂ ವಿಮೆ ಮಾಡಿಸಿದ್ದೇವೆ. ಪೌರ ಕಾರ್ಮಿಕರಿಗೆ ಆಶ್ರಯ ಯೋಜನೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಸ್ಥಳದಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಡುವಂತೆ ಸಭೆಯಲ್ಲಿ ಮನವಿ ಮಾಡಿದರು. ನಗರಸಭಾ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಕಂದಾಯಗಳನ್ನು ಕಟ್ಟಿಸಿ ನಗರಸಭೆಗೆ ಆದಾಯ ಹೆಚ್ಚಿಸಲು ಪ್ರಯತ್ನಿಸಬೇಕು ಎಂದರು.

 ಈ ಸಂದರ್ಭದಲ್ಲಿ ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮುರಳಿ, ನಗರಸಭೆ ಸದಸ್ಯರಾದ ಎಲ್.ಅನಿಲ್‌ಕುಮಾರ್, ಕೃಷ್ಣಮೂರ್ತಿ, ನಾರಾಯಣಸ್ವಾಮಿ, ಶಿವಮ್ಮ, ವೆಂಕಟಸ್ವಾಮಿ, ಸುರೇಶ್, ಅಕ್ರಂ, ಎಸ್.ರಾಘವೇಂದ್ರ, ಮುಖಂಡರಾದ ಎಸ್.ಎಂ.ರಮೆಶ್, ಕಿಷನ್, ಲಕ್ಷ್ಮಿನಾರಾಯಣ(ಲಚ್ಚಿ), ಆರೋಗ್ಯ ನಿರೀಕ್ಷಕಿ ಶೋಭ, ವ್ಯವಸ್ಥಾಪಕ ನಾಗರಾಜ್ ಹಾಜರಿದ್ದರು.

 

Like, Follow, Share ನಮ್ಮ ಶಿಡ್ಲಘಟ್ಟ

Facebook: https://www.facebook.com/sidlaghatta

Instagram: https://www.instagram.com/sidlaghatta

Telegram: https://t.me/Sidlaghatta

Twitter: https://twitter.com/hisidlaghatta

ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:

WhatsApp: https://wa.me/917406303366?text=Hi

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -
Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!