ಶಿಡ್ಲಘಟ್ಟ ನಗರದ ರೇಷ್ಮೆ ಗೂಡಿನ ಮಾರುಕಟ್ಟೆಗೆ ರಾಜ್ಯ ರೇಷ್ಮೆ ಅಭಿವೃದ್ಧಿ ಆಯುಕ್ತ ಪೆದ್ದಪಯ್ಯ ಭೇಟಿ ನೀಡಿ ಇ-ಹರಾಜು ಸೇರಿದಂತೆ ಮಾರುಕಟ್ಟೆಯಲ್ಲಿ ನಡೆಯುತ್ತಿರುವ ವ್ಯಾಪಾರ ವಹಿವಾಟಿನ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಜೊತೆಗೆ ಮಾರುಕಟ್ಟೆಯಲ್ಲಿ ಡಿಜಿಟಲ್ ಪೇಮೆಂಟ್ ಸುಲಭವಾಗಿ ಆಗುವ ಸಲುವಾಗಿ ಬ್ಯಾಂಕಿನ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ಭರವಸೆ ನೀಡಿದರು.
ರೇಷ್ಮೆ ನೂಲು ಬಿಚ್ಚಾಣಿಕೆದಾರರ ಅಧ್ಯಕ್ಷ ಅನ್ಸರ್ ಖಾನ್ ಮಾತನಾಡಿ, ಶಿಡ್ಲಘಟ್ಟ ರೇಷ್ಮೆ ಗೂಡಿನ ಮಾರುಕಟ್ಟೆಗೆ ಗೂಡು ಕಡಿಮೆ ಬರುತ್ತಿದೆ. ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹಧನ ಸಹಿತ ಇನ್ನಿತರೆ ಸೌಲಭ್ಯಗಳನ್ನು ಒದಗಿಸಿ ಅನುಕೂಲ ಕಲ್ಪಿಸಬೇಕು. ಅದೇ ರೀತಿ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೂ ಸಹ ಪ್ರೋತ್ಸಾಹಧನವನ್ನು ನೀಡಿ ರೇಷ್ಮೆ ಉದ್ದಿಮೆಯನ್ನು ಅಭಿವೃದ್ಧಿಗೊಳಿಸಲು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ರೇಷ್ಮೆ ಉಪನಿರ್ದೇಶಕ ಆಂಜನೇಯಗೌಡ, ಶಿಡ್ಲಘಟ್ಟ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಯ ಉಪನಿರ್ದೇಶಕ ನರಸಿಂಹಮೂರ್ತಿ, ಸಹಾಯಕ ನಿರ್ದೇಶಕ ಭಾನುಪ್ರಕಾಶ್, ನೂಲು ಬಿಚ್ಚಾಣಿಕೆದಾರ ಸಂಘದ ಮುಂಡರಾದ ಜಿ. ರೆಹಮನ್, ಬಾಂಬೆ ನವಾಜ್, ನವೀದ್, ಮುಜ್ಜು, ಸಾದಿಕ್ ಹಾಜರಿದ್ದರು.
Like, Follow, Share ನಮ್ಮ ಶಿಡ್ಲಘಟ್ಟ
Facebook: https://www.facebook.com/sidlaghatta
Instagram: https://www.instagram.com/sidlaghatta
Telegram: https://t.me/Sidlaghatta
Twitter: https://twitter.com/hisidlaghatta
ಸುದ್ದಿಗಳು ಹಾಗೂ ಮಾಹಿತಿಗಾಗಿ ಸಂಪರ್ಕಿಸಿ:
WhatsApp: https://wa.me/917406303366?text=Hi