Sidlaghatta, Chikkaballapur : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಸೂಚನೆಯಂತೆ ನವೆಂಬರ್ 16, ಭಾನುವಾರ ಶಿಡ್ಲಘಟ್ಟದಲ್ಲಿ ‘ವೋಟ್ ಚೋರ್ ಗದ್ದಿ ಚೋಡ್’ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲು ಕಾಂಗ್ರೆಸ್ ಪಕ್ಷ ಸಜ್ಜಾಗಿದೆ ಎಂದು ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “ಭಾನುವಾರ ಬೆಳಗ್ಗೆ 10.30ಕ್ಕೆ ನಗರದಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸಹಿ ಅಭಿಯಾನ ಆರಂಭವಾಗಲಿದೆ. ಬಳಿಕ ಬಸ್ ನಿಲ್ದಾಣದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಬಿಜೆಪಿಯ ಮತಗಳ್ಳತನದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಾ. ಎಂ.ಸಿ. ಸುಧಾಕರ್, ಕೆ.ಎಚ್. ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಉಸ್ತುವಾರಿ ಉದಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ತಮ್ಮ ಬೆಂಬಲ ಸೂಚಿಸಬೇಕೆಂದು ರಾಜೀವ್ ಗೌಡ ಮನವಿ ಮಾಡಿದರು.
For Daily Updates WhatsApp ‘HI’ to 7406303366
